ರಾಷ್ಟ್ರಪತಿ ಅಂಕಿತ ಬಿದ್ದರೆ ವೈದ್ಯರ ಕೊರತೆಯಿರಲ್ಲ: ಆರೋಗ್ಯ ಸಚಿವ ಶಿವಾನಂದ ಪಾಟೀಲ

7

ರಾಷ್ಟ್ರಪತಿ ಅಂಕಿತ ಬಿದ್ದರೆ ವೈದ್ಯರ ಕೊರತೆಯಿರಲ್ಲ: ಆರೋಗ್ಯ ಸಚಿವ ಶಿವಾನಂದ ಪಾಟೀಲ

Published:
Updated:

ವಿಜಯಪುರ: ‘ವೈದ್ಯಕೀಯ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎರಡು ವರ್ಷ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ ಮಸೂದೆಗೆ ರಾಷ್ಟ್ರಪತಿ ತಮ್ಮ ಅಂಕಿತ ಹಾಕಿದರೆ, ವೈದ್ಯರ ಕೊರತೆಯೇ ಕಾಡಲ್ಲ’ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ‘ಪ್ರತಿ ವರ್ಷ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರ್ಕಾರದ ಕೋಟಾದಡಿ ಸೀಟು ಮತ್ತು ಸೌಲಭ್ಯ ಪಡೆದು, ವೈದ್ಯಕೀಯ ಶಿಕ್ಷಣ ಪೂರೈಸಿದರೂ ಸಹ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಿರುವುದಕ್ಕೆ ಇದರಿಂದ ಕಡಿವಾಣ ಬೀಳಲಿದೆ’ ಎಂದರು.

‘ಸರ್ಕಾರದ ಶುಲ್ಕದಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಕೆಲ ವೈದ್ಯ ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶದಲ್ಲೇ ಸೇವೆ ಸಲ್ಲಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟು, ಸೀಟು ಗಿಟ್ಟಿಸಿಕೊಂಡಿದ್ದರು. ಆದರೆ ಬಹುಪಾಲು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಗೆ ಕರ್ತವ್ಯಕ್ಕೆ ತೆರಳುತ್ತಿಲ್ಲ’ ಎಂದು ಇದೇ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿದರು.

‘ಕೇಂದ್ರದ ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ಪ್ರಥಮ ರಾಜ್ಯ ನಮ್ಮದು. ಈ ಯೋಜನೆಗಾಗಿ ₹ 900 ಕೋಟಿ ಹಾಗೂ ಔಷಧಗಳ ಗುಣಮಟ್ಟ ಕಾಪಾಡಲು ಔಷಧ ನಿಯಂತ್ರಣ ಇಲಾಖೆಯ ಬಲವರ್ಧನೆಗಾಗಿ ₹ 40 ಕೋಟಿ ವಿಶೇಷ ಅನುದಾನ ನೀಡಲಾಗಿದೆ’ ಎಂದು ಸಚಿವರು ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !