ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಗಣಿಗಾರಿಕೆ: ಕಾನೂನು ಹೋರಾಟದ ಎಚ್ಚರಿಕೆ

Last Updated 18 ಫೆಬ್ರುವರಿ 2020, 9:13 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಕ್ವಾರಿ,ಮರಳು ದಂಧೆಯ ವಿರುದ್ಧಕಾನೂನು ಹೋರಾಟ ನಡೆಸುವುದಾಗಿ ಕರುನಾಡ ಯುವ ಶಕ್ತಿಯ (ಕೆವೈಎಸ್) ಅಧ್ಯಕ್ಷ ವಸಂತಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯ ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲೇ ಅಕ್ರಮ ಕಲ್ಲುಗಣಿಗಾರಿಕೆ, ಮರಳುದಂಧೆ ನಡೆಯುತ್ತಿದೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಅರಣ್ಯನಾಶ, ಪರಿಸರ ನಾಶದ ಜತೆಗೆ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಗಣಿಗಾರಿಕೆ ನಡೆಯುವ ಸುತ್ತಲ ಜನರ ಜೀವನದ ಮೇಲೆದುಷ್ಪರಿಣಾಮ ಬಿರುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ಶಾಮೀಲಾಗಿದ್ದಾರೆ. ಜಿಲ್ಲೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಕಲ್ಲುಕ್ವಾರಿಗಳಿವೆ. ಅಧಿಕೃತವಾಗಿ ಕಲ್ಲು ಗಣಿಗಾರಿಕೆ ಮಾಡುವವರೂ ಬೊಕ್ಕಸಕ್ಕೆ ಹಣ ಕಟ್ಟಿಲ್ಲ. ಇದರ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು. ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT