ಮಂಗಳವಾರ, ಸೆಪ್ಟೆಂಬರ್ 21, 2021
26 °C
ಪ್ರತಿಯೊಬ್ಬ ಕೂಲಿ ಕಾರ್ಮಿಕರಿನಿಗೂ ಕೆಲಸ ಸಿಗಲಿ

‘ನರೇಗಾ ಮೂಲಕ ಅಭಿವೃದ್ಧಿ ಸಾಧಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ ತಾಲ್ಲೂಕಿನ ದೊಡ್ಡ ಆಲಹಳ್ಳಿ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಪ್ರಕಾಶ್‌ ಮಾತನಾಡಿದರು

ಕನಕಪುರ: ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳನ್ನು ನರೇಗಾ ಮೂಲಕ ಮಾಡಿಕೊಳ್ಳಬಹುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದರು.

ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ದೊಡ್ಡಆಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಗ್ರಾಮಸಭೆ ಹಾಗೂ ರೋಜ್‌ಗಾರ್ ದಿವಸ್‌ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನರೇಗಾ ಯೋಜನೆಯಲ್ಲಿ ಯಾವುದೇ ಇತಿಮಿತಿ ಇರುವುದಿಲ್ಲ. ಅದಕ್ಕೆ ಸೂಕ್ತವಾದ ಜಾಬ್‌ ಕಾರ್ಡ್‌ಗಳು ಬೇಕಿದ್ದು ಪಂಚಾಯಿತಿಯಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಕಾಮಗಾರಿಗಳ ಪಟ್ಟಿ ಮಾಡಿ ಕ್ರಿಯಾ ಯೋಜನೆ ತಯಾರಿಸಬೇಕಿದೆ. ಅದಕ್ಕಾಗಿ ಗ್ರಾಮದಲ್ಲಿನ ಜನರು ವೈಯಕ್ತಿಕ ಕಾಮಗಾರಿ ಪಟ್ಟಿ ನೀಡಬೇಕೆಂದು ಮನವಿ ಮಾಡಿದರು.

ಸಂಸದ ಸುರೇಶ್‌ ಅವರು, ನರೇಗಾದಲ್ಲಿ ಏನೇನು ಕಾರ್ಯಕ್ರಮ ಮತ್ತು ಅಭಿವೃದ್ಧಿ ಕೆಲಸ ಮಾಡಬಹುದು ಎಂಬುದನ್ನು ಮೊದಲೇ ಗುರುತಿಸಿ ಪಂಚಾಯಿತಿಗಳಿಗೆ ಪಟ್ಟಿ ನೀಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕಳೆದ ವರ್ಷ ಅತಿ ಹೆಚ್ಚಿನ ನರೇಗಾ ಹಣ ಬಳಕೆ ಮಾಡಿ ಹೆಚ್ಚಿನ ಅಭಿವೃದ್ಧಿ ಮಾಡಲಾಯಿತು ಎಂದು ತಿಳಿಸಿದರು.

ಈ ಬಾರಿಯೂ 2018–19ನೇ ಸಾಲಿನಲ್ಲಿ ಕೆಲಸ ಮಾಡಲು ಈಗಲೇ ಪಟ್ಟಿಮಾಡಿ ಕಾರ್ಯಕ್ರಮ ರೂಪಿಸಬೇಕಿದೆ ಎಂದರು.

ಪ್ರತಿ 6 ತಿಂಗಳಿಗೊಮ್ಮೆ ಗ್ರಾಮ ಸಭೆ ನಡೆಸಲಾಗುತ್ತದೆ. ಅದರಲ್ಲಿ ಗ್ರಾಮದ ಎಲ್ಲ ಜನರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ ತಮ್ಮ ಸಲಹೆ ಸೂಚನೆ ಸಭೆ ಮೂಲಕ ಪಂಚಾಯಿತಿಗೆ ನೀಡಬೇಕೆಂದು ಹೇಳಿದರು.

ಅಭಿವೃದ್ಧಿ ಅಧಿಕಾರಿ ಶಿವಲಿಂಗೇಗೌಡ ಮಾತನಾಡಿ, 2017–18ನೇ ಸಾಲಿನಲ್ಲಿ ₹86 ಸಾವಿರ ಮಾನವ ದಿನಗಳ ಸೃಜಿಸಿ ₹33.86 ಲಕ್ಷ ಖರ್ಚು ಮಾಡಲಾಗಿದೆ. ನರೇಗಾ ಯೋಜನೆ ಬಳಕೆಯಲ್ಲಿ ತಾಲ್ಲೂಕಿನಲ್ಲಿ 5ನೇ ಸ್ಥಾನದಲ್ಲಿದ್ದು ಈ ಬಾರಿ ₹4 ಕೋಟಿಗೂ ಹೆಚ್ಚಿನ ಹಣ ಖರ್ಚು ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸಣ್ಣ ಕೈಗಾರಿಕೆ ಇಲಾಖೆ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಮಾತನಾಡಿ, ಪ್ರತಿಯೊಬ್ಬ ಕೂಲಿ ಕಾರ್ಮಿಕರಿನಿಗೂ ಕೆಲಸ ಸಿಗುವಂತೆ ಮತ್ತು ಗ್ರಾಮದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಿ ನರೇಗಾ ಯೋಜನೆ ಜಾರಿಗೊಂಡಿದೆ. ಗ್ರಾಮದ ಜನರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡರೆ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಮಾಡಬಹುದೆಂದು ಹೇಳಿದರು.

ಕೃಷಿ ಇಲಾಖೆ ಅಧಿಕಾರಿ ನಿಜಲಿಂಗಪ್ಪ, ತೋಟಗಾರಿಕೆ ಅಧಿಕಾರಿ ಪ್ರಕಾಶ್, ಪಶು ಸಂಗೋಪನೆ ಇಲಾಖೆ ಅಧಿಕಾರಿ ಡಾ.ಧನಂಜಯ ಇಲಾಖೆಯ ಸವಲತ್ತುಗಳ ಬಗ್ಗೆ ತಿಳಿಸಿಕೊಟ್ಟರು. ಸದಸ್ಯರಾದ ಗಿರೀಶ್, ಸಾವಿತ್ರಮ್ಮ, ರತ್ನಮ್ಮ, ಚಂದ್ರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು