ತ್ಯಾಗ –ಬಲಿದಾನದ ಫಲವಾಗಿ ಸ್ವಾತಂತ್ರ್ಯ

7

ತ್ಯಾಗ –ಬಲಿದಾನದ ಫಲವಾಗಿ ಸ್ವಾತಂತ್ರ್ಯ

Published:
Updated:
Deccan Herald

ವಿಜಯಪುರ: ದೇಶದಾದ್ಯಂತ ಅಸಂಖ್ಯಾತ ಮಹನೀಯರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ಪ್ರಾಣಾರ್ಪಣೆ ಮಾಡಿದ್ದಾರೆ. ರಾಜ್ಯದಲ್ಲೂ ಅನೇಕ ಮಹನೀಯರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಬಲಿದಾನ ನೀಡಿದ್ದಾರೆ. ಈ ಮಹನೀಯರ ತ್ಯಾಗ ಮತ್ತು ಬಲಿದಾನದ ಫಲವಾಗಿ ಇಂದು ನಾವು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ ಎಂದು ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಮಹನೀಯರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ. ಇವರ ಸ್ಮರಣೆಯಿಂದ ಯುವ ಜನಾಂಗದಲ್ಲಿ ರಾಷ್ಟ್ರಪ್ರೇಮ ಜಾಗೃತಗೊಳಿಸಿ ಅವರನ್ನು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಪುರಸಭಾ ಸದಸ್ಯ ಎಂ.ಸತೀಶ್ ಕುಮಾರ್ ಮಾತನಾಡಿ, ರಾಷ್ಟ್ರದ ಸಾರ್ವಭೌಮತೆ, ಏಕತೆಯ ಮೇಲೆ ಗೌರವಾದರಗಳ ಮನಸ್ಥಿತಿಯನ್ನು ಕಾಯ್ದುಕೊಳ್ಳುವಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು. ವಿಶಿಷ್ಟ ವೈವಿಧ್ಯ ಮಯ ಭಾರತೀಯ ಸಂಸ್ಕೃತಿಗೆ ಮಾನ್ಯತೆ ನೀಡಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕು ರೂಪಿಸುವ ಕಲೆ ಪ್ರತಿಯೊಬ್ಬರ ಆದ್ಯತೆಯಾಗಬೇಕು ಎಂದು ತಿಳಿಸಿದರು.

ಸದಸ್ಯ ಆರ್.ಸಿ.ಮಂಜುನಾಥ್ ಮಾತನಾಡಿ, ತಂತ್ರಜ್ಞಾನಗಳು ಮುಂದುವರಿದಂತೆ ಸಂಕುಚಿತ ಮನಃಸ್ಥಿತಿ ವ್ಯಾಪಕಗೊಂಡು ಸವಾಲಾಗಿ ಪರಿಣಮಿಸುತ್ತಿದೆ. ಪರಸ್ಪರ ಸಂಬಂಧಗಳು ಮರೆಯಾಗಿ ಮಾನವೀಯತೆ ನಶಿಸಿ ರಾಕ್ಷಸೀಯ ಪ್ರವೃತ್ತಿ ಬೆಳೆಯುತ್ತಿರುವುದು ಆತಂಕಕಾರಿ ವಿಷಯ. ಪುಸ್ತಕಗಳನ್ನು ಓದುವ, ಸುತ್ತಲಿನ ಪರಿಸರ, ಸಮಾಜವನ್ನು ಸೂಕ್ಷ್ಮವಾಗಿ ಗಮನಿಸುವ ಪ್ರವೃತ್ತಿ ಮಾನವನನ್ನು ಎತ್ತರಕ್ಕೇರಿಸುತ್ತದೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ಸಿಬ್ಬಂದಿ, ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಪುರಸಭಾ ಕಾರ್ಮಿಕರು, ಪೊಲೀಸ್ ಕಾನ್‌ಸ್ಟೆಬಲ್‌ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ಪುರಸಭಾ ಸದಸ್ಯರು, ಇಲಾಖೆಯ ಅಧಿಕಾರಿಗಳು, ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !