ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾತ್ರಿ: 1,108 ಕಲಾವಿದರಿಂದ ಶಾಸ್ತ್ರೀಯ ನೃತ್ಯ

Last Updated 9 ಫೆಬ್ರುವರಿ 2018, 20:28 IST
ಅಕ್ಷರ ಗಾತ್ರ

ಬೆಂಗಳೂರು: ಶಿವರಾತ್ರಿ ಹಬ್ಬ ಹಾಗೂ ಬ್ರಹ್ಮ ಕುಮಾರೀಸ್‌ ಸಂಸ್ಥೆಯ 82ನೇ ವಾರ್ಷಿಕೋತ್ಸವ ಆಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ರಾಜಯೋಗ ಶಿಕ್ಷಕಿ ಸುಮಾ ತಿಳಿಸಿದರು.

ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದ ಅವರು, ‘11, 12 ಹಾಗೂ 13ರಂದು ಸುಬ್ರಹ್ಮಣ್ಯನಗರದ ನಾಡಪ್ರಭು ಕೆಂಪೇಗೌಡ ಮೈದಾನದಲ್ಲಿ ಸಂಜೆ 5 ಗಂಟೆಗೆ 1,108 ಕಲಾವಿದರು 2,216 ದೀಪಗಳನ್ನು ಹಿಡಿದು ಶಾಸ್ತ್ರೀಯ ನೃತ್ಯ ಪ್ರದರ್ಶಿಸಲಿದ್ದಾರೆ. 12ರಂದು ಭಕ್ತರಿಗಾಗಿ ಚಾಮರಾಜಪೇಟೆಯಲ್ಲಿರುವ ಪಾಲಿಕೆಯ ಪದವಿಪೂರ್ವ ಕಾಲೇಜು ಆವರಣದಲ್ಲಿ 1 ಲಕ್ಷಕ್ಕೂ ಹೆಚ್ಚು ಎಲ್‌ಇಡಿ ಬಲ್ಬ್‌ಗಳಿಂದ ಅಲಂಕೃತಗೊಂಡ ಶಿವಲಿಂಗದ ದರ್ಶನ ವ್ಯವಸ್ಥೆ ಇರಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT