ಗುರುವಾರ , ಫೆಬ್ರವರಿ 27, 2020
19 °C

ವಚನಾನಂದ ಶ್ರೀ ಹೇಳಿಕೆ ಸಮರ್ಥಿಸಿದ ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶಿವಮೊಗ್ಗ: ಮಠಾಧೀಶರು ಸೇರಿದಂತೆ ಯಾರೇ ಆದರೂ ತಮ್ಮ ಸಮುದಾಯದ ಶಾಸಕರಿಗೆ ಮಂತ್ರಿಗಿರಿ ಕೇಳುವುದು ತಪ್ಪಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಚನಾನಂದ ಸ್ವಾಮೀಜಿ ಅವರ ಮಾತನ್ನು ಸಮರ್ಥಿಸಿಕೊಂಡರು.

ನಗರದಲ್ಲಿ ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ತಮ್ಮ ಸಮುದಾಯದ ಪರವಾಗಿ ವಚನಾನಂದ ಸ್ವಾಮೀಜಿ ಧ್ವನಿ ಎತ್ತಿದ್ದಾರೆ. ಆದರೆ, ಕೆಲವರು ಇದನ್ನೇ ದೊಡ್ಡದು ಮಾಡಿ ರಾಜಕಾರಣ ಮಾಡುತ್ತಿದ್ದಾರೆ. ವಿಷಯ ಇಲ್ಲಿಗೆ ಮುಗಿಸಬೇಕು. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಶ್ರೀಗಳ ಹೇಳಿಕೆ ಬೆಳೆಸಬಾರದು ಎಂದು ಮನವಿ ಮಾಡಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನಿ ಮೋದಿ, ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು.

ಪೌರತ್ವ ಕಾಯ್ದೆ ಪರ–ವಿರೋಧದ ಮೂಲಕ ದೇಶದ್ರೋಹಿಗಳು ಯಾರು? ದೇಶಭಕ್ತರು ಯಾರು ಎಂದು ಗೊತ್ತಾಗುತ್ತಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು