ಬಿಜೆಪಿಯ 10 ಶಾಸಕರು ಸಂಪರ್ಕದಲ್ಲಿದ್ದಾರೆ: ಪ್ರಿಯಾಂಕ್ ಖರ್ಗೆ

7

ಬಿಜೆಪಿಯ 10 ಶಾಸಕರು ಸಂಪರ್ಕದಲ್ಲಿದ್ದಾರೆ: ಪ್ರಿಯಾಂಕ್ ಖರ್ಗೆ

Published:
Updated:
Deccan Herald

ಕಲಬುರ್ಗಿ: ‘ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದರೆ ನಾವು ಸ್ಥಿರಗೊಳಿಸಲು ಮುಂದಾಗಬೇಕಾಗುತ್ತದೆ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರು ಹಿಂಬಾಗಿಲ ಮೂಲಕ ಅಸ್ಥಿರಗೊಳಿಸಲು ಮುಂದಾದರೆ, ನಾವು ಸಾಂವಿಧಾನಿಕವಾಗಿಯೇ ಮಾಡುತ್ತೇವೆ. ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗುವ ಹಗಲುಗನಸು ಕಾಣುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ರಾಜ್ಯ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರಲ್ಲ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಫಡಣವೀಸ್, ಯೋಗಿ ಆದಿತ್ಯನಾಥ ಅವರು ರಾಜ್ಯಕ್ಕೆ ಬರುತ್ತಿರುವುದನ್ನು ನೋಡಿದರೆ ರಾಜ್ಯದ ಬಿಜೆಪಿ ನಾಯಕರು ಅಸಮರ್ಥರಾಗಿದ್ದಾರೆ ಎಂಬುದು ಗೊತ್ತಾಗುತ್ತದೆ’ ಎಂದು ಕುಟುಕಿದರು.

‘ರಮೇಶ ಜಾರಕಿಹೊಳಿ ಪಕ್ಷ ಬಿಡುವುದಿಲ್ಲ, ಅವರೊಬ್ಬ ನಿಷ್ಠಾವಂತ ಕಾರ್ಯಕರ್ತ. ಆದರೆ, ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನೆ ಕೂರುವುದಿಲ್ಲ. ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್ ಚುನಾವಣೆ ವಿಷಯವನ್ನು ಪಕ್ಷದ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಬಗೆಹರಿಸಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 2

  Frustrated
 • 1

  Angry

Comments:

0 comments

Write the first review for this !