ಶನಿವಾರ, ಜನವರಿ 18, 2020
21 °C

ಕಲಬುರ್ಗಿಯಲ್ಲಿ ನಿಷೇಧಾಜ್ಞೆ: ಶಾಲಾ‌ ಕಾಲೇಜುಗಳಿಗೂ ರಜೆ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ಇದೇ 19ರಂದು ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕಲಬುರ್ಗಿ ಬಂದ್‌ಗೆ ಕರೆ ನೀಡಿರುವುದರಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

‘ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಘೋಷಿಸಲಾಗಿದೆ‌. ಹೀಗಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ‌ಮಾಡಿದ್ದೇವೆ’ ಎಂದು ಜಿಲ್ಲಾಧಿಕಾರಿ ಶರತ್ ಬಿ. 'ಪ್ರಜಾವಾಣಿ'ಗೆ ತಿಳಿಸಿದರು.

ಕಲಬುರ್ಗಿ ಪೀಪಲ್ಸ್ ಫೋರಂ ವತಿಯಿಂದ ಇಂದು ಬಂದ್ ಕರೆ ನೀಡಿದ್ದರೂ ನಗರದಲ್ಲಿ ಜನಸಂಚಾರ ಎಂದಿನಂತಿದೆ. ಬಂದ್ ‌ಹಾಗೂ ಪ್ರತಿಭಟನಾ ಮೆರವಣಿಗೆಗೆ ಪೊಲೀಸರು ಅವಕಾಶ ‌ನೀಡಿಲ್ಲ.


ಕಲಬುರ್ಗಿ ಬಸ್ ನಿಲ್ದಾಣದಲ್ಲಿ ಗುರುವಾರ ಬಸ್‌ ಸಂಚಾರ ಎಂದಿನಂತೆ ಇತ್ತು

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು