ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿನಿಂದ ಇಬ್ಬರು ನಿಧನ

ಜಿಲ್ಲೆಯಲ್ಲಿ ಮತ್ತೆ 276 ಪ್ರಕರಣ ದೃಢ
Last Updated 11 ಏಪ್ರಿಲ್ 2021, 4:13 IST
ಅಕ್ಷರ ಗಾತ್ರ

ಕಲಬುರ್ಗಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಇಬ್ಬರು ನಿಧನರಾಗಿದ್ದಾರೆ ಎಂದು ಶನಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.

ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ನಗರದ ಆಳಂದ ಕಾಲೊನಿಯ 82 ವರ್ಷದ ವೃದ್ಧ ಏ 5ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ 9ರಂದು ನಿಧನ ಹೊಂದಿದ್ದಾರೆ.

ಅಲ್ಲದೆ‌ ತೀವ್ರ ವಿಷಮಶೀತ ಜ್ವರ (ಐಎಲ್ಐ) ಹಿನ್ನೆಲೆಯಿಂದ ಅಫಜಲಪುರ ತಾಲ್ಲೂಕಿನ ಉಡಚಣ‌ ಗ್ರಾಮದ 57 ವರ್ಷದ ಮಹಿಳೆ ಏ.5 ರಂದು ತಮ್ಮ‌ ಮನೆಯಲ್ಲಿಯೆ ನಿಧನರಾಗಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ 362 ಜನ ನಿಧನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಶನಿವಾರ ಮತ್ತೆ 276 ಜನರಿಗೆ ಸೋಂಕು ಪತ್ತೆಯಾಗಿದ್ದು, 118 ಜನ ಗುಣಮುಖರಾಗಿದ್ದಾರೆ. 475 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 1922 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT