ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತಿಬ್ಬರ ಸಾವು, 189 ಮಂದಿಗೆ ಸೋಂಕು

Last Updated 16 ಆಗಸ್ಟ್ 2020, 7:15 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯಲ್ಲಿ ಶನಿವಾರ ಮತ್ತಿಬ್ಬರು‌ ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದ್ದು, ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 161ಕ್ಕೆ ಏರಿದೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ ಆಸ್ತಮಾ ಮತ್ತು ಹೃದ್ರೋಗದಿಂದ ಬಳಲುತ್ತಿದ್ದ ಯಡ್ರಾಮಿ ತಾಲ್ಲೂಕಿನ‌ ವಡಗೇರಾ ಗ್ರಾಮದ 60 ವರ್ಷದ ವೃದ್ಧ ಆ. 3ರಂದು ಮೃತಪಟ್ಟಿದ್ದಾರೆ. ಅವರಿಗೆ ಸೋಂಕು ತಗುಲಿದ್ದು ಶನಿವಾರ ವರದಿಯಿಂದ ದೃಢಪಟ್ಟಿದೆ.

ತೀವ್ರ ಉಸಿರಾಟದ ಸಮಸ್ಯೆ, ಅಧಿಕ ರಕ್ತದೊತ್ತಡ, ಹೃದ್ರೋಗ ಹಾಗೂ ನಿಮೋನಿಯಾದಿಂದ ಬಳಲುತ್ತಿದ್ದ ನಗರದ ಸಂತೋಷ‌ ಕಾಲೊನಿಯ 48 ವರ್ಷದ ವ್ಯಕ್ತಿ ಸಹ ಕೊರೊನಾದಿಂದ ಮೃತಪಟ್ಟಿದ್ದಾರೆ. ಚಿಕಿತ್ಸೆಗಾಗಿ ಆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಆ.14ರಂದು ಅಸುನೀಗಿದರು.

ಅಲ್ಲದೇ, ಹೊಸದಾಗಿ ಜಿಲ್ಲೆಯಲ್ಲಿ ಮತ್ತೆ 189 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,540ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ, 219 ಜನ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಿಂದ ಇಲ್ಲಿವರೆಗೆ 6,369 ಸೋಂಕಿತರು ಗುಣಮುಖರಾದಂತೆ ಆಗಿದೆ. ಇನ್ನೂ, 2010 ಜನ ಸಕ್ರಿಯ ಸೋಂಕಿತರು ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT