ಮಂಗಳವಾರ, ಆಗಸ್ಟ್ 11, 2020
26 °C

2 ಸಾವಿರ ಗಡಿ ದಾಟಿದಕೋವಿಡ್‌, ಮತ್ತಿಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೋವಿಡ್‌ ಸೋಂಕಿನಿಂದ ನಗರದಲ್ಲಿ ಮತ್ತಿಬ್ಬರು ವೃದ್ಧರು ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌36ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ತಿಳಿಸಿದರು.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಜ್ವರ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ನಗರದ ಸವೇರಾ ಕಾಲೊನಿಯ 84 ವರ್ಷದ ವೃದ್ಧ ಜುಲೈ 4ರಂದು ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಜುಲೈ 7ರಂದು ಸೋಂಕು ತಗುಲಿದ್ದು ಖಾತ್ರಿಯಾಗಿ ಜುಲೈ 10ರಂದು ನಿಧನರಾಗಿದ್ದಾರೆ.

ಅದೇ ರೀತಿ ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಅಧಿಕ ರಕ್ತದೊತ್ತಡ ಕಾಯಿಲೆಯೊಂದಿಗೆ ಬಳಲುತ್ತಿದ್ದ ನಗರದ ಎಂ.ಎಸ್.ಕೆ.ಮಿಲ್ ಪ್ರದೇಶದ 80 ವರ್ಷದ ವೃದ್ಧ ಜುಲೈ 4ರಂದು ಅಸ್ಪತ್ರೆಗೆ ದಾಖಲಾಗಿದ್ದರು. ಜುಲೈ 7ರಂದು ಸೋಂಕು ತಗುಲಿದ್ದು ದೃಢವಾಗಿ ಜುಲೈ 10 ರಂದು ನಿಧನರಾಗಿದ್ದಾರೆ.

ಶನಿವಾರ ಮತ್ತೆ 65 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2024ಕ್ಕೆ ಏರಿದೆ. 16 ಮಂದಿ ಗುಣಮುಖರಾಗಿದ್ದಾರೆ. 528 ಮಂದಿ ಕೋವಿಡ್ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.