ಕಲಬುರ್ಗಿ: ಜಿಲ್ಲೆಯಲ್ಲಿ 20.99 ಲಕ್ಷ ಮತದಾರರು

7
ಲೋಕಸಭೆ ಚುನಾವಣೆ: ಅಂತಿಮ ಮತದಾರರ ಪಟ್ಟಿ ಪ್ರಕಟ

ಕಲಬುರ್ಗಿ: ಜಿಲ್ಲೆಯಲ್ಲಿ 20.99 ಲಕ್ಷ ಮತದಾರರು

Published:
Updated:

ಕಲಬುರ್ಗಿ: ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಅಂತಿಮ ಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 20,99,162 ಮತದಾರರು ಇದ್ದಾರೆ.

2018ರ ಅಕ್ಟೋಬರ್ 10ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಆ ಪಟ್ಟಿಯಲ್ಲಿ 20,96,780 ಮತದಾರರು ಇದ್ದರು. ನಂತರ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಎರಡು ಕಡೆ ಹೆಸರು ಇರುವ, ಮರಣ ಹೊಂದಿದ ಹಾಗೂ ಬೇರೆಡೆ ವರ್ಗಾವಣೆಯಾದಂತಹ ಸುಮಾರು 19 ಸಾವಿರ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಯಿತು ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಂತಿಮ ಮತದಾರರ ಪಟ್ಟಿಯು ಜಿಲ್ಲಾಧಿಕಾರಿ ಕಚೇರಿ, ಮಹಾನಗರಪಾಲಿಕೆ ಹಾಗೂ ತಹಶೀಲ್ದಾರರ ಕಚೇರಿಗಳಲ್ಲಿ ಲಭ್ಯವಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಹಾಗೂ ತೆಗೆದುಹಾಕಲು ಅವಕಾಶವಿದ್ದು, ಇಂತಹ ಹೆಸರುಗಳನ್ನು ಉಪ ಮತದಾರರ ಪಟ್ಟಿಯಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

ಚುನಾವಣೆ ಸಂದರ್ಭದಲ್ಲಿ ಅಂಗವಿಕಲರು ಮತದಾನಕ್ಕೆ ಮನೆಯಿಂದ ಕರೆದುಕೊಂಡು ಹೋಗಲು ಮನವಿ ಸಲ್ಲಿಸಿದರೆ ಅಂತಹವರನ್ನು ಮನೆಯಿಂದ ಕರೆ ತರಲಾಗುವುದು. ಈಗಾಗಲೇ ಎಲ್ಲ ಮತಗಟ್ಟೆಗಳಲ್ಲಿ ಶೌಚಾಲಯ ಮತ್ತು ರ‍್ಯಾಂಪ್‌ ವ್ಯವಸ್ಥೆ ಮಾಡಲಾಗಿದೆ. ಅಂಗವಿಕಲರ ಮತದಾರರನ್ನು ಕರೆತರಲು ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಗಾಲಿ ಕುರ್ಚಿ ವ್ಯವಸ್ಥೆ ಮಾಡಲು ನಿರ್ದೇಶನ ನೀಡಲಾಗಿದೆ ಎಂದರು.

ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಜಿಲ್ಲೆಯಲ್ಲಿ ಉಚಿತ ಸಹಾಯವಾಣಿ ಸಂಖ್ಯೆ 1950 ಪ್ರಾರಂಭಿಸಲಾಗಿದ್ದು, ಸದ್ಯ ಸ್ಥಿರ ದೂರವಾಣಿಯಿಂದ ಕರೆ ಮಾಡಬಹುದಾಗಿದೆ. ಮುಂದಿನ ದಿನಗಳಲ್ಲಿ ಮೊಬೈಲ್‌ನಿಂದ ಕರೆ ಮಾಡುವ ಸೌಲಭ್ಯಕಲ್ಪಿಸಲಾಗುವುದು ಎಂದು ಹೇಳಿದರು.

ಎಲ್ಲ ಪಕ್ಷಗಳ ಬೂತ ಮಟ್ಟದ ಏಜೆಂಟರುಗಳ ಯಾದಿಯನ್ನು ಆದಷ್ಟು ಬೇಗ ಸಲ್ಲಿಸಬೇಕೆಂದು ವಿವಿಧ ಪಕ್ಷಗಳ ಮುಖಂಡರಿಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !