ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 21 ವರ್ಷ ಜೈಲು

Last Updated 17 ಸೆಪ್ಟೆಂಬರ್ 2022, 4:49 IST
ಅಕ್ಷರ ಗಾತ್ರ

ಕಲಬುರಗಿ: ಕಾಳಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭ ಧರಿಸುವಂತೆ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಗುಂಡಪ್ಪ ಸುಭಾಷ್ ದೇಗುಲ ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯ 21 ವರ್ಷ ಜೈಲು ಶಿಕ್ಷೆ ₹ 25 ಸಾವಿರ ದಂಡ ವಿಧಿಸಿದ್ದಾರೆ.

2019ರ ಸೆಪ್ಟೆಂಬರ್ 25ರಿಂದ 2020ರ ಫೆಬ್ರುವರಿ 20ರವರೆಗೆ ಹಲವು ಬಾರಿ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಕುರಿತು ಬಾಲಕಿಯ ತಂದೆ ನೀಡಿದ ದೂರನ್ನು ಆಧರಿಸಿ ಕಾಳಗಿ ಸಿಪಿಐ ಭೋಜರಾಜ ರಾಠೋಡ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ದೋಷಾರೋಪ‍ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಆಲಿಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಪೋಕ್ಸೊ ಕಾಯ್ದಯಡಿ ಅಪರಾಧಕ್ಕೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ₹ 20 ಸಾವಿರ ದಂಡ, ಜೀವ ಬೆದರಿಕೆ ಹಾಕಿದ ಅಪರಾಧಕ್ಕೆ 1 ವರ್ಷ ಕಾರಾಗೃಹ ಶಿಕ್ಷೆ, ₹ 5 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸಂತ್ರಸ್ತ ಬಾಲಕಿಗೆ ಕಾನೂನು ಪ್ರಾಧಿಕಾರದ ವತಿಯಿಂದ ₹ 7 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರಪ್ಪ ಬಿ. ತುಪ್ಪದ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT