ರಾಮಮಂದಿರ ನಿರ್ಮಾಣಕ್ಕೆ ₹25 ಲಕ್ಷ ದೇಣಿಗೆ

ಕಲಬುರ್ಗಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶರಣಬಸವೇಶ್ವರ ಸಂಸ್ಥಾನದಿಂದ ₹ 25 ಲಕ್ಷ ದೇಣಿಗೆ ನೀಡುವುದಾಗಿ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು.
ರಾಮ ಮಂದಿರ ನಿಧಿ ಸಮರ್ಪಣಾ ಕಾರ್ಯಕ್ರಮಕ್ಕೆ ನಗರದಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ‘ನಾಡಿನ ಜನ ಮಂದಿರ ನಿರ್ಮಾಣಕ್ಕಾಗಿ ಮುಕ್ತ ಮನಸ್ಸಿನಿಂದ ದೇಣಿಗೆ ನೀಡಬೇಕು’ ಎಂದರು.
‘ರಾಮ ಮಂದಿರ ಜನರ ಮಂದಿರವಾಗಬೇಕು ಎಂಬುದು ನಮ್ಮಬಯಕೆ. ಹಾಗಾಗಿ, ಜನರಿಂದ ದೇಣಿಗೆ ಸಂಗ್ರಹಿಸುತ್ತಿದ್ದೇವೆ. ರಾಜ್ಯದ 27,500 ಗ್ರಾಮಗಳ 90 ಲಕ್ಷ ಮನೆಗಳಿಗೆ ಭೇಟಿ ನೀಡುತ್ತೇವೆ. ಕನಿಷ್ಠ ₹ 10ರಿಂದ ಗರಿಷ್ಠ ಎಷ್ಟಾದರೂ ದೇಣಿಗೆ ನೀಡಬಹುದು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೃಷ್ಣ ಜೋಶಿ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.