ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ ಪರೀಕ್ಷೆ–2: ನಿಷೇಧಾಜ್ಞೆ ಜಾರಿ

Published 27 ಏಪ್ರಿಲ್ 2024, 6:21 IST
Last Updated 27 ಏಪ್ರಿಲ್ 2024, 6:21 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿಯ 2ನೇ ವಾರ್ಷಿಕ ಪರೀಕ್ಷೆಯು ಇದೇ 29ರಿಂದ ಮೇ 16ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

‘ಕಲಬುರಗಿ ನಗರದಲ್ಲಿ 11, ಆಳಂದ, ಅಫಜಲಪುರ, ಚಿತ್ತಾಪುರದಲ್ಲಿ ತಲಾ 2 ಹಾಗೂ ಜೇವರ್ಗಿ, ಚಿಂಚೋಳಿ, ಸೇಡಂನಲ್ಲಿ ತಲಾ ಒಂದೊಂದು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳ ಸುತ್ತಲಿನ 200 ಮೀಟರ್‌ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT