ಗುರುವಾರ , ಜುಲೈ 7, 2022
25 °C
ಮುಖ್ಯಮಂತ್ರಿಯಿಂದ ಉದ್ಘಾಟನೆ, ಯಡಿಯೂರಪ್ಪ ಸನ್ಮಾನ, ಎಚ್‌.ಡಿ. ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಆಗಮನ

ಕಲಬುರಗಿ: 3ರಿಂದ ಪತ್ರಕರ್ತರ 36ನೇ ರಾಜ್ಯ ಮಟ್ಟದ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ‘2022ರ ಜನವರಿ 3 ಹಾಗೂ 4ರಂದು ಕಲಬುರಗಿಯ ಬಸರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಪತ್ರಕರ್ತರ 36ನೇ ರಾಜ್ಯ ಮಟ್ಟದ ಸಮ್ಮೇಳನ ನಡೆಯಲಿದೆ. ಎರಡುವರೆ ದಶಕದ ನಂತರ ನಡೆಯುತ್ತಿರುವ ಈ ಸಮ್ಮೇಳನಕ್ಕೆ ಭರದ ಸಿದ್ಧತೆಗಳು ನಡೆದಿವೆ’ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

‘ಜ.3ರಂದು ಮಧ್ಯಾಹ್ನ 1.30ಕ್ಕೆ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಲಿದೆ. ನಂತರ 5 ಗಂಟೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ ಸಾಧಕರ ಗೌರವಿಸುವ ‘ಬ್ರ್ಯಾಂಡ್ ಕಲಬುರಗಿ’ ಕಾರ್ಯಕ್ರಮ ನಡೆಯಲಿದೆ. ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಈ ಕಾರ್ಯಕ್ರಮ ಉದ್ಘಾಟಿಸುವರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅತಿಥಿಗಳಾಗಿ ಪಾಲ್ಗೊಳ್ಳವರು. ಸಂಜೆ 7ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

‘ಎರಡನೇ ದಿನ ಜ.4ರಂದು ಬೆಳಿಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸುವರು. ಮಹಾದಾಸೋಹ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಚಿವ ಮುರುಗೇಶ ನಿರಾಣಿ ವಸ್ತುಪ್ರದರ್ಶನ ಉದ್ಘಾಟಿಸುವರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯಸಚೇತಕ ಡಾ.ಅಜಯಸಿಂಗ್‌, ಸಂಸದ ಡಾ.ಉಮೇಶ ಜಾಧವ ವ್ಯಂಗ್ಯ ಚಿತ್ರ ಪ್ರದರ್ಶನ ಉದ್ಘಾಟಿಸುವರು’ ಎಂದರು.

‘ಅದೇ ದಿನ ಮಧ್ಯಾಹ್ನ 12.30ಕ್ಕೆ ಡಿಜಿಟಲ್‌ ಮಾಧ್ಯಮ ಸ್ಥಿತ್ಯಂತರ ಕುರಿತು ಗೋಷ್ಠಿ- 1, ಮಧ್ಯಾಹ್ನ 2ಕ್ಕೆ ಮಾಧ್ಯಮ ಮತ್ತು ಸರ್ಕಾರ ಸವಾಲುಗಳು-2ನೇ ಗೋಷ್ಠಿ, ಸಂಜೆ 4 ಗಂಟೆಗೆ ಮಹಿಳೆ ಮತ್ತು ಸವಾಲುಗಳು-3ನೇ ಗೋಷ್ಠಿ ನಡೆಯಲಿದೆ. ಸಮ್ಮೇಳನದಲ್ಲಿ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು’ ಎಂದರು.

ಸಂಜೆ 5 ಗಂಟೆಗೆ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ದಿಕ್ಸೂಚಿ ಭಾಷಣ ಮಾಡುವರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಕಾರ್ಜುನ ಖರ್ಗೆ ಅಭಿನಂದನಾ ನುಡಿಗಳನ್ನಾಡುವರು. ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ, ಮುರುಗೇಶ ನಿರಾಣಿ, ಶಿವರಾಮ ಹೆಬ್ಬಾರ,  ಸಿ.ಎನ್.ಅಶ್ವಥನಾರಾಯಣ, ಗೋವಿಂದಯ್ಯ ಮೊದಲಾದವರು ಪಾಲ್ಗೊಳ್ಳುವರು. ಪತ್ರತಕರ್ತರಾದ ರವಿ ಹೆಗಡೆ ಸಮಾರೋಪ ಭಾಷಣ ಮಾಡುವರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಅವಂಟಿ, ಉಪಾಧ್ಯಕ್ಷರಾದ ಶಾಮ ಸಿಂಧೆ, ಗುರುಬಸಪ್ಪ ಸಜ್ಜನಶೆಟ್ಟಿ, ಖಜಾಂಚಿ ರಾಜು ದೇಶಮುಖ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು