ಕಲಬುರಗಿ: ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ಎಲ್ಲ ಜನವಸತಿ ಪ್ರದೇಶಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ₹ 7,200 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಇದಕ್ಕೆ ರಾಜ್ಯ ಸರ್ಕಾರ ತನ್ನ ಪಾಲಿನ ₹ 3,914.45 ಕೋಟಿ ವೆಚ್ಚ ಮಾಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಎರಡೂ ಜಿಲ್ಲೆಗಳ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಯನ್ನು ಜಲ ಜೀವನ್ ಮಿಷನ್ ಅಡಿ ಆರಂಭಿಸಲಾಗುವುದು. ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ 2011ರ ಜನಗಣಿತಿಯಂತೆ 22.14 ಲಕ್ಷ ಜನಸಂಖ್ಯೆ ಇದ್ದು, 2038ರ ವೇಳೆಗೆ ಈ ಎರಡೂ ಜಿಲ್ಲೆಗಳ ಜನಸಂಖ್ಯೆ 31.54 ಲಕ್ಷಕ್ಕೆ ಏರುವುದೆಂದು ನಿರೀಕ್ಷಿಸಲಾಗಿದ್ದು ಈ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಗ್ರಾಮಗಳು ಹಾಗೂ ಜನವಸತಿಗಳಿಗೆ ಈ ಯೋಜನೆಯಡಿ ನೀರು ಪೂರೈಸಲು ಯೋಜನೆ ಸಿದ್ಧಪಡಿಸಲಾಗಿದೆ’ ಎಂದಿದ್ದಾರೆ.

‘ಈ ಜಿಲ್ಲೆಗಳಲ್ಲಿ ಪ್ರಸ್ತುತ ತೆರೆದ ಬಾವಿ ಹಾಗೂ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ನೀರಿನ ಗುಣಮಟ್ಟ, ಪೂರೈಕೆಯಲ್ಲಿ ಕೊರತೆಯಂತಹ ಸವಾಲುಗಳನ್ನು ಎದುರಿಸಲಾಗುತ್ತಿದೆ. ಈ ಎರಡೂ ಜಿಲ್ಲೆಗಳ ಅಂತರ್ಜಲ ಮೂಲಗಳು ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿವೆ. ಡಾ.ನಂಜುಂಡಪ್ಪ ಸಮಿತಿ ವರದಿಯಂತೆ ಈ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳು ಹಿಂದುಳಿದಿದ್ದು, ಈ ಯೋಜನೆಯಿಂದ 31.54 ಲಕ್ಷ ಜನರು ಪರಿಶುದ್ಧ ಕುಡಿಯುವ ನೀರು ಪಡೆಯಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ಬಸವಸಾಗರದಿಂದ ಕುಡಿಯುವ ನೀರು ಒದಗಿಸುವ ಈ ಯೋಜನೆ ಕಾರ್ಯಗತಗೊಂಡ ನಂತರ ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ಪ್ರತಿ ವ್ಯಕ್ತಿಗೆ ಪ್ರತಿನಿತ್ಯ 55 ಲೀಟರ್ ಶುದ್ಧ ನೀರು ಲಭ್ಯವಾಗಲಿದ್ದು, ಈ ಬೇಡಿಕೆಗೆ ಅನುಗುಣವಾಗಿ 2.80 ಟಿಎಂಸಿ ಅಡಿ ನೀರು ಅವಶ್ಯವಾಗುತ್ತದೆ. ಈ ಮಹತ್ವದ ಯೋಜನೆಗೆ ಕಳೆದ ವಾರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ’ ಎಂದು ಪ್ರಿಯಾಂಕ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.