ಗುರುವಾರ , ಮೇ 19, 2022
21 °C

ಕಲಬುರಗಿ: ವಿದ್ಯುತ್‌ ಕಳವು; ₹ 4 ಲಕ್ಷ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಸೇಡಂ ತಾಲ್ಲೂಕಿನ ಮದರ ನಾಗಸನಹಳ್ಳಿಯಲ್ಲಿ ಕಲ್ಲಿನ ಕ್ವಾರಿಗೆ ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದ ವ್ಯಕ್ತಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ₹ 4 ಲಕ್ಷ ದಂಡ ವಿಧಿಸಿದೆ.

ಪ್ರತಾಪರೆಡ್ಡಿ ಸೋಮನಾಥರೆಡ್ಡಿ ಶಿಕ್ಷೆಗೆ ಒಳಗಾದವರು. 2018ರಲ್ಲಿ ಜೆಸ್ಕಾಂ ಜಾಗೃತ ದಳದ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಸರ್ಕಾರದ ಪರವಾಗಿ 1ನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಎಸ್‌.ಆರ್‌. ನರಸಿಂಹಲು ವಾದ ಮಂಡಿಸಿದ್ದರು.

ನ್ಯಾಯಾಧೀಶರಾದ ಶುಕ್ಲಾಕ್ಷ ಪಾಲನ್‌ ಅವರು ವಿಚಾರಣೆ ನಡೆಸಿ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ದಂಡ ಕಟ್ಟಲು ಆಗದಿದ್ದರೆ 2 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು