ಬುಧವಾರ, ಜುಲೈ 28, 2021
26 °C

ಕಲಬುರ್ಗಿ: ಸೊನ್ನ ಬ್ಯಾರೇಜಿನಿಂದ 4000 ಕ್ಯುಸೆಕ್ ನೀರು ಭೀಮಾ‌ ನದಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಅಫಜಲಪುರ ತಾಲ್ಲೂಕಿನ ಸೊನ್ನ ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಿದ್ದು, ಅದರಂತೆ ಶನಜವಾರ ಬ್ಯಾರೇಜಿನಿಂದ 4000 ಕ್ಯುಸೆಕ್‌ ನೀರನ್ನು ಭೀಮಾ ನದಿಗೆ ಹರಿಸಲಾಗಿದೆ ಎಂದು ಭೀಮಾ ಏತ‌ ನೀರಾವರಿ ಯೋಜನೆಯ ಕಾರ್ಯಪಾಲಕ ಎಂಜಿನೀಯರ್ ಅಶೋಕ ಆರ್. ಕಲಾಲ್ ತಿಳಿಸಿದ್ದಾರೆ.

ಬ್ಯಾರೇಜಿಗೆ ಒಳಹರಿವಿನ‌ ನೀರಿನ ಪ್ರಮಾಣ 4000 ಕ್ಯುಸೆಕ್ ಇದ್ದು, ಅಷ್ಟೇ ಪ್ರಮಾಣದ ನೀರು ನದಿಗೆ ಹರಿಬಿಡಲಾಗುತ್ತಿದೆ. ಆದರಿಂದ ನದಿ ಡಂಡೆಯಲ್ಲಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು  ಪ್ರದೇಶದ ರೈತರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿ‌.ಎಂ‌.ಸಿ. ಇದ್ದು, ಶನಿವಾರ ಬೆಳಿಗ್ಗೆ 2.74 ಟಿ.ಎಂ.ಸಿ. ನೀರು ಸಂಗ್ರಹಣಗೊಂಡಿದೆ ಎಂದರು.

ಜುಲೈ ಅಂತ್ಯ ಮತ್ತು ಆಗಸ್ಟ್ ತಿಂಗಳಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬರುವ ಸಾಧ್ಯತೆ ಇದ್ದು, ಆಗ ನೀರಿನ ಒಳಹರಿವು ಇನ್ನು ಹೆಚ್ಚಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು 4000 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ ಎಂದು ಅಶೋಕ ಆರ್. ಕಲಾಲ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು