ಶುಕ್ರವಾರ, ಜೂನ್ 18, 2021
24 °C

ಕಲಬುರ್ಗಿಯಲ್ಲಿ ಕೋವಿಡ್‌ ಸೋಂಕಿನಿಂದ ಮತ್ತೆ 5 ಜನರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೋವಿಡ್‌–19 ಸೋಂಕಿನಿಂದ ನಗರದಲ್ಲಿ ಮತ್ತೆ ಐವರು ಸಾವನ್ನಪ್ಪಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.  ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 159ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ನಗರದ ಸಿದ್ದರಾಮೇಶ್ವರ ನಗರದ 69 ವರ್ಷದ ವೃದ್ಧ ಜು. 24ರಂದು ಆಸ್ಪತ್ರೆಗೆ ದಾಖಲಾಗಿ ಜು. 31ರಂದು ಸಾವನ್ನಪ್ಪಿದ್ದಾರೆ. ವಿಷಮ ಶೀತ ಜ್ವರ (ಐಎಲ್‌ಐ) ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರ್ಗಿಯ ಆಳಂದ ಕಾಲೊನಿಯ 46 ವರ್ಷದ ಮಹಿಳೆ ಜು 24ರಂದು ಮನೆಯಲ್ಲೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರ್ಗಿಯ ಮಹಾದೇವ ನಗರದ 55 ವರ್ಷದ ಮಹಿಳೆ ಜು 23ರಂದು ಆಸ್ಪತ್ರೆಗೆ ದಾಖಲಾಗಿ ಜು.24ರಂದು ಮೃತಪಟ್ಟಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಶಾಂತಿ ನಗರದ 57 ವರ್ಷದ ಪುರುಷ ಜು 26ರಂದು ಆಸ್ಪತ್ರೆಗೆ ದಾಖಲಾಗಿ ಜು 29ರಂದು ನಿಧನರಾದರು. ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಮಹೆಬೂಬ್ ನಗರದ 52 ವರ್ಷದ ಮಹಿಳೆ ಆ 11ರಂದು ಆಸ್ಪತ್ರೆಗೆ ದಾಖಲಾಗಿ ಆ 13ರಂದು ನಿಧನರಾಗಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ 229 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 8351 ತಲುಪಿದ್ದು, 376 ಜನ ಗುಣಮುಖರಾಗಿ ಮನೆಗೆ ಮರಳಿದ್ದು, ಇದರೊಂದಿಗೆ 6150 ಜನ ಗುಣಮುಖರಾದಂತಾಗಿದೆ. 2042 ಸಕ್ರಿಯ ಪ್ರಕರಣಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.