ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ; 5 ವರ್ಷ ಜೈಲು ಶಿಕ್ಷೆ

Last Updated 11 ಜನವರಿ 2019, 12:56 IST
ಅಕ್ಷರ ಗಾತ್ರ

ಕಲಬುರ್ಗಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ನವೀನ್ ಶೇಷಪ್ಪ ಗಾರಂಪಳ್ಳಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಬಸ್ ನಿಲ್ದಾಣದಲ್ಲಿ ಕಾಯುತ್ತ ನಿಂತಿದ್ದ ಬಾಲಕಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದ. ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಪ್ಪ ಎಸ್. ಅವರು 5 ವರ್ಷ ಕಠಿಣ ಜೈಲು ಶಿಕ್ಷೆ, ₹1.20 ಲಕ್ಷ ದಂಡ ವಿಧಿಸಿದರು. ನೊಂದ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ ₹1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೊ) ಎಲ್.ವಿ.ಚಟ್ನಾಳಕರ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT