ಗುರುವಾರ , ಫೆಬ್ರವರಿ 27, 2020
19 °C
ತಡೋಳಾ ಪಂಚಾಯಿತಿ ಅವ್ಯವಹಾರ ತನಿಖೆಗೆ ಆಗ್ರಹ

ನಿರಶನ 5ನೇ ದಿನಕ್ಕೆ, ಮೂವರು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಳಂದ: ತಾಲ್ಲೂಕಿನ ತಡೋಳಾ ಗ್ರಾಮ ಪಂಚಾಯಿತಿಯಲ್ಲಿ ₹14 ಲಕ್ಷ ಅನುದಾನ ದುರ್ಬಳಕೆಯ ತನಿಖೆಗೆ ಒತ್ತಾಯಿಸಿ ಪಂಚಾಯಿತಿ ಕಚೇರಿ ಎದುರು ಗ್ರಾಮಸ್ಥರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮಂಗಳವಾರ ಐದನೇ ದಿನಕ್ಕೆ ಕಾಲಿಟ್ಟಿದ್ದು, ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ಮಧ್ಯಾಹ್ನ ಉಪವಾಸ ನಿರತ ಅಸ್ಪಾಕ್‌ ಮುಲ್ಲಾ, ಪರಶುರಾಮ, ಮೈಲಾರಿ ಅಸ್ವಸ್ಥರಾಗಿ ಖಜೂರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿಭಟನಕಾರರನ್ನು ಉದ್ದೇಶಿಸಿ ಮುಖಂಡ ಮೌಲಾ ಮುಲ್ಲಾ ಮಾತನಾಡಿ, ‘ಪಂಚಾಯಿತಿಗೆ ನಿಯೋಜನೆಗೊಂಡ ಪಿಡಿಒ ಒಂದು ತಿಂಗಳಲ್ಲಿ ₹14 ಲಕ್ಷ ಅವ್ಯವಹಾರ ಮಾಡಿದ್ದಾರೆ. ತಕ್ಷಣ ಬೇರೆಡೆ ವರ್ಗವಾಗಿದ್ದಾರೆ. ಇದು ಪೂರ್ವ ನಿಯೋಜಿತ ಭ್ರಷ್ಠಾಚಾರವಾಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ’ ಎಂದು ಅವರು ಆಪಾದಿಸಿದರು.

ಪ್ರತಿಭಟನೆ ಸ್ಥಳಕ್ಕೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿದರು. ಪ್ರತಿಭಟನಾಕಾರರು ಅವ್ಯವಹಾರದ ತನಿಖೆ ಹಾಗೂ ಪಿಡಿಒ ಅವರ ವಿರುದ್ಧ ಕ್ರಮಕ್ಕೆ ಬಿಗಿ ಪಟ್ಟು ಹಿಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು