ಬುಧವಾರ, ಮೇ 12, 2021
18 °C

ಮತ್ತೆ ಆರು ಸಿಬ್ಬಂದಿ ವಜಾ; ನಾಲ್ವರ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಕಳೆದ 7ರಿಂದ ಅನಿರ್ದಿಷ್ಟ ಅವಧಿಯ ಮುಷ್ಕರ ನಡೆಸುತ್ತಿರುವ ಸಿಬ್ಬಂದಿ ವಿರುದ್ಧ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಶಿಸ್ತು ಕ್ರಮ ಮುಂದುವರಿದಿದ್ದು, ಮಂಗಳವಾರ ಮತ್ತೆ ಆರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ನಾಲ್ವರನ್ನು ಅಮಾನತುಗೊಳಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.

ಇದಕ್ಕೂ ಮುನ್ನ 67 ಸಿಬ್ಬಂದಿಯನ್ನು ವಜಾ ಮಾಡಿ, 39 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. 245 ಸಿಬ್ಬಂದಿಯನ್ನು ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

‘ವಜಾ ಹಾಗೂ ಅಮಾನತು ಆದೇಶವನ್ನು ಹಿಂದಕ್ಕೆ ಪಡೆಯುವ ಯಾವುದೇ ಚಿಂತನೆ ಸಂಸ್ಥೆಯ ಮುಂದಿಲ್ಲ. ಆದ್ದರಿಂದ ಸುಳ್ಳು ಸುದ್ದಿಗಳಿಗೆ ಗಮನ ಕೊಡದೇ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು. ಇದರಿಂದ ಶಿಸ್ತು ಕ್ರಮ ಕೈಗೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುವುದಿಲ್ಲ. ಪ್ರಯಾಣಿಕರ ಹಿತವನ್ನು ಕಡೆಗಣಿಸಿ ಕರ್ತವ್ಯದಿಂದ ದೂರ ಉಳಿದರೆ ಕಠಿಣ ಕ್ರಮ ಅನಿವಾರ್ಯ’ ಎಂದು ಕೂರ್ಮಾರಾವ್ ಎಚ್ಚರಿಕೆ ನೀಡಿದ್ದಾರೆ.

ಮತ್ತೆ ಎರಡು ಪ್ರಕರಣ: ಕರ್ತವ್ಯ ಅಡ್ಡಿ ಉಂಟು ಮಾಡಿದ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಕೆಲಸಕ್ಕೆ ಹಾಜರಾಗದಂತೆ ಬೇರೆ ಸಿಬ್ಬಂದಿಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಸಂಸ್ಥೆಯು ನೌಕರರ ವಿರುದ್ಧ ಮತ್ತೆ ಎರಡು ಪ್ರಕರಣ ದಾಖಲಿಸಿದೆ. ಇದರಿಂದಾಗಿ ಒಟ್ಟಾರೆ 55 ಸಿಬ್ಬಂದಿ ವಿರುದ್ಧ 30 ಪ್ರಕರಣಗಳು ದಾಖಲಾದಂತಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.