ಮಂಗಳವಾರ, ಮೇ 18, 2021
24 °C

ಲಾಕ್‌ಡೌನ್‌ ಉಲ್ಲಂಘನೆ: 61 ರೌಡಿಶೀಟರ್‌ ಕೇಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಲಾಕ್‌ಡೌನ್‌ ನಿಯಮ ಉಲ್ಲಂಘಣೆ ಮಾಡಿದ ಆರೋಪದ ಮೇಲೆ 61 ಬಂದಿಯ ಮೇಲೆ ರೌಡಿಶೀಟರ್‌ ಕೇಸ್‌ ತೆರೆಯಲಾಗಿದೆ.

ಶನಿವಾರ (ಏ. 18)ದವರೆಗೆ ಲಾಕ್‌ಡೌನ್‌ ಉಲ್ಲಂಘಣೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಒಟ್ಟು ಒಟ್ಟು 38 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 75 ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ 61 ಮಂದಿ ಮೇಲೆ ರೌಡಿಶೀಟರ್‌ ಕೇಸ್‌ ತೆರೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ತಿಳಿಸಿದ್ದಾರೆ.

ಕಲಬುರ್ಗಿ ನಗರವನ್ನು ಹೊರತುಪಡಿಸಿ ಆಳಂದ, ಅಫಜಲಪುರ, ಜೇವರ್ಗಿ, ಚಿತ್ತಾಪುರ, ಶಹಾಬಾದ್‌, ಸೇಡಂ ಮತ್ತು ಚಿಂಚೋಳಿ ತಾಲ್ಲೂಕಿನ ಪಟ್ಟಣಗಳಲ್ಲಿ ಅನವಶ್ಯಕವಾಗಿ ಹೊರಗೆ ಬರುವುದು, ಉದ್ಧಟತನ ಪ್ರದರ್ಶನ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು