ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ ಜಿಲ್ಲೆಯಲ್ಲಿ ಶೇ 64.85 ಸಾಕ್ಷರತೆ: ಮಧು ಬಂಗಾರಪ್ಪ

Published 12 ಜುಲೈ 2023, 15:50 IST
Last Updated 12 ಜುಲೈ 2023, 15:50 IST
ಅಕ್ಷರ ಗಾತ್ರ

ಕಲಬುರಗಿ: ‘ಕಲಬುರಗಿ ಜಿಲ್ಲೆಯಲ್ಲಿ ಒಟ್ಟು ಶೇ 64.85 ಸಾಕ್ಷರತಾ ಪ್ರಮಾಣವಿದ್ದು, ಈ ಪೈಕಿ ಶೇ 74.38 ರಷ್ಟು ಪುರುಷರು ಮತ್ತು ಶೇ 55.09 ರಷ್ಟು ಮಹಿಳೆಯರು ಸಾಕ್ಷರರಾಗಿದ್ದಾರೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಸದಸ್ಯ ಬಿ.ಜಿ.ಪಾಟೀಲ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ‘ಯಾದಗಿರಿ ಜಿಲ್ಲೆಯಲ್ಲಿ ಒಟ್ಟು ಶೇ 51.83 ಸಾಕ್ಷರತಾ ಪ್ರಮಾಣವಿದೆ. ಈ ಪೈಕಿ ಶೇ 62.25 ಪುರುಷರು, ಶೇ 41.38 ಮಹಿಳೆಯರು ಸಾಕ್ಷರರಿದ್ದಾರೆ. ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಕಲಬುರಗಿ ಜಿಲ್ಲೆಯಲ್ಲಿ 410, ಯಾದಗಿರಿ ಜಿಲ್ಲೆಯಲ್ಲಿ 467 ಕಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT