ರಾಗಿ, ಜೋಳ ಖರೀದಿ: 7 ಕೇಂದ್ರ ಸ್ಥಾಪನೆ

7

ರಾಗಿ, ಜೋಳ ಖರೀದಿ: 7 ಕೇಂದ್ರ ಸ್ಥಾಪನೆ

Published:
Updated:
Prajavani

ಕಲಬುರ್ಗಿ: ಜಿಲ್ಲೆಯ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮತ್ತು ಬಿಳಿಜೋಳ ಖರೀದಿಸಲು ಏಳು ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಖರೀದಿ ಏಜೆನ್ಸಿಯಾಗಿದ್ದು, ಉತ್ತಮ ಗುಣಮಟ್ಟದ ರಾಗಿ ಮತ್ತು ಬಿಳಿಜೋಳ ಖರೀದಿಸಲಿದೆ. ಕ್ವಿಂಟಲ್ ರಾಗಿಗೆ ₹2,897 ಹಾಗೂ ಬಿಳಿಜೋಳಕ್ಕೆ ₹2,450 ದರ ನಿಗದಿಪಡಿಸಲಾಗಿದೆ. ಖರೀದಿ ಕೇಂದ್ರಗಳಲ್ಲಿ ಜ.15ರ ವರೆಗೆ ನೋಂದಣಿ ಮಾಡಿಕೊಳ್ಳಬೇಕು. ಒಬ್ಬ ರೈತರಿಂದ ಗರಿಷ್ಠ 75 ಕ್ವಿಂಟಲ್ ರಾಗಿ ಮತ್ತು ಪ್ರತಿ ಎಕರೆಗೆ 6 ಕ್ವಿಂಟಲ್ ಬಿಳಿಜೋಳ ಖರೀದಿಸಲಾಗುತ್ತದೆ. ಜ.1ರಿಂದ ಮಾರ್ಚ್ 31ರ ವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ರೈತರಿಂದ ಖರೀದಿಸುವ ರಾಗಿ ಮತ್ತು ಬಿಳಿಜೋಳದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು. ರೈತರು ಕಡ್ಡಾಯವಾಗಿ ಆಧಾರ್ ಕಾರ್ಡ್, ಪಹಣಿ, ರಾಷ್ಟ್ರೀಕೃತ ಬ್ಯಾಂಕ್‌ ಖಾತೆ ಸಂಖ್ಯೆ, ಭಾವಚಿತ್ರ ಮತ್ತು ಐಎಫ್‌ಎಸ್‌ಸಿ ಕೋಡ್ ಹೊಂದಿರುವ ಪಾಸ್‌ಬುಕ್‌ನ ಪ್ರತಿ, ಮೊಬೈಲ್ ಸಂಖ್ಯೆಯೊಂದಿಗೆ ಹೆಸರು ನೊಂದಾಯಿಸಿಕೊಳ್ಳಬೇಕು. ಮಧ್ಯವರ್ತಿಗಳು/ಏಜೆಂಟರು ಖರೀದಿ ಕೇಂದ್ರಗಳಿಗೆ ರಾಗಿ ಮತ್ತು ಬಿಳಿಜೋಳ ತಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರಗಳ ವಿವರ: ಕಲಬುರ್ಗಿ, ಅಫಜಲಪುರ, ಆಳಂದ, ಚಿಂಚೋಳಿ, ಚಿತ್ತಾಪುರ, ಜೇವರ್ಗಿ ಮತ್ತು ಸೇಡಂ ತಾಲ್ಲೂಕು– ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ (ಎಪಿಎಂಸಿ).

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !