ಬುಧವಾರ, ಅಕ್ಟೋಬರ್ 5, 2022
26 °C

ವೀರ್, ಉಜನಿ ಜಲಾಶಯಗಳಿಂದ ಭೀಮಾ ನದಿಗೆ 70 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಮಹಾರಾಷ್ಟ್ರದ ವೀರ್‌ ಮತ್ತು ಉಜನಿ ಜಲಾಶಯದಿಂದ ಭೀಮಾ‌ ನದಿಗೆ 70 ಸಾವಿರಕ್ಕೂ  ಹೆಚ್ಚು ಕ್ಯುಸೆಕ್ ನೀರನ್ನು ಭೀಮಾ ನದಿಗೆ ಶನಿವಾರ ಹರಿಬಿಟ್ಟಿದ್ದು, ಯಾವುದೇ ಸಮಯದಲ್ಲಿ ಜಿಲ್ಲೆಯ ನದಿಗೆ ಬರುವ ಸಾಧ್ಯತೆ ಇದೆ. ಹೀಗಾಗಿ ಭೀಮಾ ನದಿ ದಂಡೆ‌ ಮತ್ತು ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್ ಕಡೆ ಸಾರ್ವಜನಿಕರು ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮನವಿ ಮಾಡಿದ್ದಾರೆ.  

ಜಲಾಶಯದಿಂದ ಈ ಪ್ರಮಾಣದ ನೀರು ಬಿಡುಗಡೆಯಿಂದ ಸದ್ಯಕ್ಕೆ ಭೀಮಾ ನದಿ ದಂಡೆಯ ಗ್ರಾಮಗಳಲ್ಲಿ ಯಾವುದೇ ಪ್ರವಾಹ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾಡಳಿತ, ಮುಂಜಾಗ್ರತಾ ಕ್ರಮವಾಗಿ ಅಫಜಲಪೂರ, ಜೇವರ್ಗಿ, ಚಿತ್ತಾಪುರ ಹಾಗೂ ಕಲಬುರಗಿ ತಾಲ್ಲೂಕಿನ ಭೀಮಾ ನದಿ ದಂಡೆಗೆ ಹೋಗದಂತೆ ಮನವಿ ಮಾಡಿದೆ.

ಪ್ರವಾಹದಿಂದ ನದಿ ದಂಡೆಯ ಗ್ರಾಮಸ್ಥರಿಗೆ ಏನಾದರೂ ಸಮಸ್ಯೆ ಕಂಡು ಬಂದಲ್ಲಿ ತುರ್ತಾಗಿ ಸಹಾಯವಾಣಿ ಸಂಖ್ಯೆ 1077 ಹಾಗೂ ದೂ.ಸಂ. 08472-278677ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು