ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಎಂಟು ಜಾನುವಾರುಗಳ ರಕ್ಷಣೆ

Last Updated 17 ಜುಲೈ 2021, 6:26 IST
ಅಕ್ಷರ ಗಾತ್ರ

ಕಲಬುರ್ಗಿ: ವಾಹನಗಳಲ್ಲಿ ಆಕಳು, ಹೋರಿಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಎಂಟು ದನಗಳನ್ನು ರಕ್ಷಿಸಿ ಗೋಶಾಲೆಗೆ ಬಿಟ್ಟಿದ್ದಾರೆ. ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ನಾಗನಹಳ್ಳಿ ವರ್ತುಲ ರಸ್ತೆಯಲ್ಲಿ ಮೂರು ವಾಹನಗಳಲ್ಲಿ ದನಗಳನ್ನು ಹಿಂಸಾತ್ಮಕವಾಗಿ ಒಯ್ಯುತ್ತಿರುವುದನ್ನು ಗಮನಿಸಿದ ಪೊಲೀಸರು ಅವುಗಳನ್ನು ತಡೆದು ವಿಚಾರಿಸಿದ್ದಾರೆ. ವಾಹನಗಳ ಚಾಲಕರಾದ ಖಣದಾಳ ಗ್ರಾಮದ ಸಲೀಂ ಪಟೇಲ್ ಮಕ್ಬುಲ್ ಪಟೇಲ್ (23), ಹಾಗರಗಾ ಕ್ರಾಸ್‌ನ ಅಕ್ರಂ ಪಾಶಾ ಜಾಫರ್ ಶಹಾ (30) ಮತ್ತು ಬಸವೇಶ್ವರ ಕಾಲೊನಿಯ ಸೈಯದ್ ಅಲ್ತಾಫ್ ಸೈಯದ್ ತಾಜೋದ್ದೀನ್ ಎಂಬುವವರನ್ನು ಬಂಧಿಸಲಾಗಿದೆ. ಪೊಲೀಷ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ, ಡಿಸಿಪಿಗಳಾದ ಅಡ್ಡೂರು ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ, ಎಸಿಪಿ ಜೆ.ಎಚ್. ಇನಾಂದಾರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಇನ್ಸಪೆಕ್ಟರ್ ಶಿವಾನಂದ ಗಾಣಿಗೇರ ನೇತೃತ್ವದಲ್ಲಿ ದಾಳಿ ನಡೆಯಿತು. ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT