ಮಂಗಳವಾರ, ಆಗಸ್ಟ್ 16, 2022
21 °C

ಕಲಬುರ್ಗಿಗೆ ಬಂದಿಳಿದ ಕೇಂದ್ರ ಪ್ರವಾಹ ಅಧ್ಯಯನ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕಳೆದ ಅಕ್ಟೋಬರ್ ನಲ್ಲಿ ಸುರಿದ ವ್ಯಾಪಕ ಮಳೆ ಹಾಗೂ ಭೀಮಾ, ಕಾಗಿಣಾ ನದಿಗಳ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಬೆಳೆಗಳ ಪರಿಶೀಲನೆ ನಡೆಸಲು ಕೇಂದ್ರದ ತಂಡ ನಗರಕ್ಕೆ ಬಂದಿಳಿದಿದೆ.

ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ವಿಪತ್ತು ‌ನಿರ್ವಹಣಾ ಪ್ರಾಧಿಕಾರದ ಜಂಟಿ ಕಾರ್ಯದರ್ಶಿ ರಮೇಶಕುಮಾರ ಘಂಟಾ ನೇತೃತ್ವದ ದ್ವಿಸದಸ್ಯ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ವಿಭಾಗದ ನಿರ್ದೇಶಕ ಡಾ. ಭರತೇಂದು ಕುಮಾರ್ ಸಿಂಗ್ ಇದ್ದಾರೆ. ಜೊತೆಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ತಂಡದಲ್ಲಿದ್ದು, ಜಿಲ್ಲಾಧಿಕಾರಿ ‌ಕಚೇರಿಯಲ್ಲಿ‌ ಸಭೆ ನಡೆಸಿತು.

ಸಭೆ ಬಳಿಕ ಕಲಬುರ್ಗಿ, ಅಫಜಲಪುರ, ಜೇವರ್ಗಿ ‌ತಾಲ್ಲೂಕಿನ ಹಲವೆಡೆ ಪ್ರವಾಹ ಅಧ್ಯಯನ ‌ನಡೆಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು