₹ 50 ಲಕ್ಷಕ್ಕಿಂತ ಹೆಚ್ಚಿನ ಪರಿಹಾರ ಕೋರಿ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ಪರಿಹಾರ ಕಾಣದವರು ಮೇಲ್ಮನವಿ ಸಲ್ಲಿಸಲು ಕಲ್ಯಾಣ ಕರ್ನಾಟಕದ ಜನರು ದೂರದ ಬೆಂಗಳೂರಿಗೆ ತೆರಳಬೇಕಿತ್ತು. ಇದರಿಂದ ಸಮಯ ಹಾಗೂ ಹಣ ವ್ಯರ್ಥವಾಗುತ್ತಿತ್ತು. ಪ್ರಕರಣಗಳೂ ಬೇಗ ಇತ್ಯರ್ಥವಾಗುತ್ತಿರಲಿಲ್ಲ. ಆದ್ದರಿಂದ ಇಲ್ಲಿನ ಕಲಬುರಗಿ ಹೈಕೋರ್ಟ್ ಪೀಠದ ವಕೀಲರ ಸಂಘ, ಮಹಾತ್ಮ ಗಾಂಧೀಜಿ ಗ್ರಾಹಕರ ಹಿತ ರಕ್ಷಣಾ ವೇದಿಕೆ, ವಿವಿಧ ಸಂಘ–ಸಂಸ್ಥೆಗಳವರು ಹೋರಾಟ ನಡೆಸಿ ಪೀಠ ಆರಂಭಿಸಬೇಕು ಎಂದು ಒತ್ತಾಯಿಸಿದ್ದರು.