ಬುಧವಾರ, ಆಗಸ್ಟ್ 10, 2022
23 °C

ವಾಡಿ: ಹಾವು ಕಡಿತದಿಂದ ಬಾಲಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಡಿ: ಹಾವು ಕಡಿತದಿಂದ ಬಾಲಕಿ ಮೃತಪಟ್ಟ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ. ವಾರ್ಡ್ ಸಂಖ್ಯೆ 20ರ ನಂದಿನಿ ಈಶ್ವರ ಜಾಧವ(3) ಮೃತ ಬಾಲಕಿ.

ಮನೆ ಪಕ್ಕದ ಅಂಗಡಿಗೆ ಸಂಜೆ 6ರ ಸುಮಾರಿಗೆ ಬಾಲಕಿ ಹೋದಾಗ ವಿಷಪೂರಿತ ಹಾವು ಕಚ್ಚಿದೆ. ತಕ್ಷಣವೇ ಬಾಲಕಿಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಚಿಂತಾ ಜನಕ ಸ್ಥಿತಿ ತಲುಪಿದ ಬಾಲಕಿಗೆ ಆಕ್ಸಿಜನ್ ಪೂರೈಕೆ ಮಾಡುವಾಗ ವಿದ್ಯುತ್ ಕಡಿತಗೊಂಡಿದೆ. ನಂತರ ಬಾಲಕಿಯನ್ನು ಕಲಬುರ್ಗಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ
ಮೃತಪಟ್ಟಿದ್ದಾಳೆ.

‘ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿಲ್ಲ. ವಿದ್ಯುತ್ ಕಡಿತದ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಇಲ್ಲದಿರುವುದು ಮಗುವಿನ ಸಾವಿಗೆ ಕಾರಣ’ ಎಂದು ಪೋಷಕರು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು