ಶನಿವಾರ, ಸೆಪ್ಟೆಂಬರ್ 24, 2022
21 °C

ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ತೀರ್ಥ ಗ್ರಾಮದ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

ತೀರ್ಥ ಗ್ರಾಮದ ರೈತ ಮಹಿಳೆ ಶ್ರೀದೇವಿ ನಿಂಗಣ್ಣಾ ಪೂಜಾರಿ (45) ಮೃತಪಟ್ಟ ಮಹಿಳೆ. ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಎತ್ತುಗಳ ಸಮೇತ ಮನೆಗೆ ತೆರಳುವಾಗ ಹಳ್ಳದ ನೀರಿನ ರಭಸ ಲೆಕ್ಕಿಸದೇ ಹಳ್ಳ ದಾಟಲು ಯತ್ನಿಸಿದರು. ಆದರೆ, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಕೊಂಡು ಹೋದರು. 

ರಾತ್ರಿ ಇಡೀ ಕುಟುಂಬ ಸದಸ್ಯರು ಮಹಿಳೆಗಾಗಿ ಹುಡುಕಾಟ ನಡೆಸಿದರು. ಭಾನುವಾರ ಬೆಳಿಗ್ಗೆ ಹೆಬಳ್ಳಿ ಗ್ರಾಮದ ಸಮೀಪದ ಹಳ್ಳದ ದಂಡೆಯಲ್ಲಿ ಮಹಿಳೆ ಶವ ಪತ್ತೆಯಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು