ಗುರುವಾರ , ಆಗಸ್ಟ್ 5, 2021
29 °C

ಅಷ್ಟಗಾದಲ್ಲಿ ಯುವಕನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ತಾಲ್ಲೂಕಿನ ಅಷ್ಟಗಾ ಗ್ರಾಮದ ಹೊರವಲಯದಲ್ಲಿ ಭಾನುವಾರ ಯುವಕನನ್ನು ಕೊಲೆ ಮಾಡಿದ್ದು, ಸಾಕ್ಷ್ಯ ನಾಶ ಮಾಡಲು ಶವವನ್ನು ಅರೆಬರೆ ಸುಟ್ಟುಹಾಕಲಾಗಿದೆ.

ಕೊಲೆಯಾದ ಯುವಕನ ವಯಸ್ಸು ಅಂದಾಜು 25 ವರ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಗುರುತು ಹಾಗೂ ಕೊಲೆಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ. ‌

ಯುವಕನನ್ನು ಊರ ಹೊರಗಡೆ ಕರೆದುಕೊಂಡು ಹೋದ ದುಷ್ಕರ್ಮಿಗಳು ಕೈಗಳನ್ನು ಹಗ್ಗದಿಂದ ಕಟ್ಟಿ, ಹೊಡೆದು ಕೊಲೆ ಮಾಡಿದ್ದಾರೆ. ನಂತರ ಪೆಟ್ರೋಲ್‌ ಸುರಿದ ಬೆಂಕಿ ಹಚ್ಚಿದ್ದಾರೆ. ಇದರಿಂದ ಶವದ ಮುಖ ಹಾಗೂ ಅರ್ಧ ದೇಹದ ಭಾಗ ಸುಟ್ಟು ಕರಕಲಾಗಿದೆ.

ಗ್ರಾಮದ ಹೊರವಲಯದ ಮುಖ್ಯರಸ್ತೆ ಪಕ್ಕದಲ್ಲೇ ಘಟನೆ ನಡೆದಿದೆ. ಪಾದಚಾರಿಗಳು ಶವ ಕಂಡು ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ. ಕಲಬುರ್ಗಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು