ಗ್ರಾ.ಪಂ ಕಚೇರಿಯಲ್ಲೇ ಆಧಾರ್‌ ತಿದ್ದುಪಡಿ

7

ಗ್ರಾ.ಪಂ ಕಚೇರಿಯಲ್ಲೇ ಆಧಾರ್‌ ತಿದ್ದುಪಡಿ

Published:
Updated:
Deccan Herald

ಕಲಬುರ್ಗಿ: ಆಧಾರ್‌ ಕಾರ್ಡ್‌ನಲ್ಲಿಯ ವಿಳಾಸ ಬದಲಾವಣೆ, ತಿದ್ದುಪಡಿ ಸೇವೆ ಜಿಲ್ಲೆಯ 264 ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಆರಂಭಗೊಂಡಿದೆ.

ಜಿಲ್ಲಾ ಪಂಚಾಯಿತಿ ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಈ ಸೇವೆಗೆ ನಂದೂರ ಕೆ. ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಚಾಲನೆ ನೀಡಿದರು.

‘ಆಧಾರ್‌ ಕಾರ್ಡ್‌ನಲ್ಲಿ ಮನೆ ವಿಳಾಸ ಬದಲಾವಣೆ, ಹೆಸರು ತಿದ್ದುಪಡಿ, ಹೊಸ ಮೊಬೈಲ್ ಸಂಖ್ಯೆ ಸೇರ್ಪಡೆ ಮಾಡುವುದಿದ್ದರೆ ಸಮೀಪದ ಗ್ರಾಮ ಪಂಚಾಯಿತಿ ಸಂಪರ್ಕಿಸಬೇಕು. ತಿದ್ದುಪಡಿ ಮಾಡಿದ ಆಧಾರ್‌ ಕಾರ್ಡ್‌ನ ಪ್ರತಿಗಳನ್ನು ಮುದ್ರಿಸಿ ನೀಡಲಾಗುವುದು’ ಎಂದು ಅವರು ಹೇಳಿದರು.

‘ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಹಾಗೂ ಸಿಬ್ಬಂದಿಗೆ ಆಡಳಿತ ಸುಧಾರಣೆ ಇಲಾಖೆಯ ಸಹಯೋಗದಲ್ಲಿ ತರಬೇತಿ ನೀಡಲಾಗಿದೆ. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಾಫ್ಟ್‌ವೇರ್‌ ಅಳವಡಿಕೆ ಪೂರ್ಣಗೊಂಡಿದೆ ’ ಎಂದರು.

ಕಲಬುರ್ಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಬಿ. ಶೃಂಗೇರಿ, ನಂದೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಂಗಮ್ಮ ಕಟ್ಟಿಮನಿ, ಜಿಲ್ಲಾ ಯೋಜನಾ ವ್ಯವಸ್ಥಾಪಕ ರಾಜೇಶ್ ಜಿಂಗಾಡೆ, ಜಿಲ್ಲಾಧಿಕಾರಿ ಕಚೇರಿಯ ಆಧಾರ್‌ ಜಿಲ್ಲಾ ಸಂಯೋಜಕ ಆನಂದ ಗಢಾಳೆ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ಕೆ.ಡಿ.ಪಿ. ಸಭೆ 12ರಂದು

ಕಲಬುರ್ಗಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ. 12ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !