ಕಲಬುರಗಿ: ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವಂತೆ ಹಾಗೂ ಹಾಸ್ಟೆಲ್ ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಲಬುರಗಿ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಪೊಲೀಸ್ ಕಮಿಷನರ್ ಕಚೇರಿ ಪಕ್ಕದ ಕನ್ಯಾ ಬಾಲಕಿಯರ ಪಿಯು ಕಾಲೇಜಿನಿಂದ ಆರ್ಚಿಡ್ ಮಾಲ್, ಲಾಹೋಟಿ ಪೆಟ್ರೋಲ್ ಪಂಪ್ ಮೂಲಕ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನೆ ನಡೆಸಿದರು.

'ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಈತನಕ ಹಾಸ್ಟೆಲ್ ಗಳಿಗೆ ಪ್ರವೇಶಾತಿ ಪೂರ್ಣಗೊಂಡಿಲ್ಲ. ಜೊತೆಗೆ ಕಳೆದು ಐದು ವರ್ಷಗಳಿಂದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಕೂಡಲೇ ಸರ್ಕಾರ ಕ್ರಮವಹಿಸಬೇಕು' ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಲು ಮೊದಲಿಗೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಬಂದರು. ಆದರೆ, ಜಿಲ್ಲಾಧಿಕಾರಿ ಅವರೇ ಮನವಿ ಸ್ವೀಕರಿಸಬೇಕು ಎಂದು ಪ್ರತಿಭಟನಕಾರರು ಪಟ್ಟು ಹಿಡಿದರು.

'ವೇರ್ ಇಸ್ ಡಿಸಿ, ಡಿಸಿ ಇನ್ ದಿ ಎಸಿ', ' ಶಿಕ್ಷಣ ವಿರೋಧಿ ಜಿಲ್ಲಾಧಿಕಾರಿಗೆ ಧಿಕ್ಕಾರ' ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸದ ರಾಜ್ಯ ಸರ್ಕಾರಕ್ಕೆ ಧಿಕ್ಕಾರಕ್ಕೆ ಎಂದು ಘೋಷಣೆ ಕೂಗಿ ಅರ್ಧಗಂಟೆಗೂ ಹೆಚ್ಚು ಹೊತ್ತು ಪ್ರತಿಭಟನೆ ನಡೆಸಿದರು.

ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.