ಜೇವರ್ಗಿ (ಕಲಬುರಗಿ): ತಾಲ್ಲೂಕಿನ ನೇದಲಗಿ–ಜೇರಟಗಿ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಕಾರು–ಟಂಟಂ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಜಾಲವಾದಿ ಗ್ರಾಮದ ಬಾಷಾಸಾಬ್ (45), ಶಂಕ್ರೆಪ್ಪ (41) ಮೃತರು.

‘ಜಾಲವಾದಿ ಗ್ರಾಮದಿಂದ ಬಾರೆಹಣ್ಣು ತುಂಬಿಕೊಂಡು ಕಲಬುರಗಿ ಕಡೆ ತೆರಳುತ್ತಿದ್ದ ಟಂಟಂ ವಾಹನವು, ಸಿಂದಗಿ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಟಂಟಂನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ರಾಜೇಸಾಬ ನದಾಫ, ಪಿಎಸ್ಐ ಚಿದಾನಂದ ಸವದಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.