ಗುರುವಾರ , ಆಗಸ್ಟ್ 11, 2022
28 °C

ಕಲಬುರಗಿ| ಬಸ್, ಪಿಕ್ ಅಪ್ ವಾಹನ ಡಿಕ್ಕಿ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ನಗರದ ಹೊರವಲಯದ ಆಳಂದ ರಸ್ತೆಯಲ್ಲಿರುವ ಪಟ್ಟಣ ಕ್ರಾಸ್ ಬಳಿ ಮಂಗಳವಾರ ರಾತ್ರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಸರಕುಸಾಗಣೆ ಮಿನಿ ವಾಹನ (ಪಿಕ್ ಅಪ್) ನಡುವೆ ಡಿಕ್ಕಿ ಸಂಭವಿಸಿ, ಪಟ್ಟಣ ಗ್ರಾಮದ ಮಲ್ಲಯ್ಯ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ. 

ಬಸ್ ಆಳಂದದಿಂದ ಕಲಬುರಗಿಗೆ ಬರುತ್ತಿದ್ದರೆ, ವಾಹನವು ಪಟ್ಟಣ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಸಂಚಾರ ಠಾಣೆ–2ರ ಪೊಲೀಸ್ ಇನ್‌ಸ್ಪೆಕ್ಟರ್ ಅಮರೇಶ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು