ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಶರಣಪ್ರಕಾಶ ಪಾಟೀಲ

ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿಕೆ
Published : 25 ಸೆಪ್ಟೆಂಬರ್ 2024, 5:53 IST
Last Updated : 25 ಸೆಪ್ಟೆಂಬರ್ 2024, 5:53 IST
ಫಾಲೋ ಮಾಡಿ
Comments

ಸೇಡಂ: ಕಲ್ಯಾಣ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಿದೆ. ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದ್ದು, ಸುಮಾರು 6 ಸಾವಿರ ಶಿಕ್ಷಕರ ಹುದ್ದೆ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಮಂಗಳವಾರ 2019-20ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯಡಿಯಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕೋಣೆಗಳ ಮತ್ತು ₹83 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಮುದಾಯ ಆರೋಗ್ಯ ಕೇಂದ್ರದ ಸ್ವಾಫ ನರ್ಸ್ ಕ್ವಾರ್ಟರ್ಸ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ‌

‘ಕಲಬುರಗಿಯಲ್ಲಿ ಸೆ.17ರಂದು ನಡೆದ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೂರಾರು ಕಾಮಗಾರಿಗಳಿಗೆ ಸುಮಾರು ₹11,780 ಕೋಟಿ ಅನುದಾನ ನೀಡಲು ಸರ್ಕಾರ ಅನುಮೋದನೆ ನೀಡಿದೆ. ಕೆಕೆಆರ್‌ಡಿಬಿಯಲ್ಲಿ ಅಕ್ಷರ ಆವಿಷ್ಕಾರ ಯೋಜನೆಯಡಿಯಲ್ಲಿ, ಶೈಕ್ಷಣಿಕ ಪ್ರಗತಿ ಸೇರಿದಂತೆ ಶಾಲಾ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ನಮ್ಮ ಸರ್ಕಾರ ಬಡವರ ಏಳಿಗೆಗೆ ನಿರಂತರ ಶ್ರಮಿಸುತ್ತಿದೆ’ ಎಂದು ಹೇಳಿದರು.

ಗ್ರಾಮದ ಮುಖಂಡ ಮಧುಸೂದನರೆಡ್ಡಿ ಮಾಲಿಪಾಟೀಲ ಮಾತನಾಡಿದರು. ಮುಧೋಳ ಗ್ರಾಮದಲ್ಲಿ ನಿರ್ಮಾಣಗೊಂಡ ಸ್ಟಾಫ್ ನರ್ಸ್ ವಸತಿ ಕಟ್ಟಡವನ್ನು ಉದ್ಘಾಟಿಸಿದರು.

ತೋಟಗಾರಿಕೆ ಮಹಾಮಂಡಳಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಸೇಡಂ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾಮ, ಮುಧೋಳ ಗ್ರಾ.ಪಂ ಅಧ್ಯಕ್ಷ ಮಂಗಿಬಾಯಿ ಮೊತ್ಯಾನಾಯಕ, ಮಧುಸೂದನರೆಡ್ಡಿ ಮಾಲಿಪಾಟೀಲ, ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ಇಒ ಚನ್ನಪ್ಪ ರಾಯಣ್ಣನವರ, ಟಿಎಚ್ಒ ಡಾ.ಸಂಜೀವಕುಮಾರ ಪಾಟೀಲ, ಶಂಕರ ಭೂಪಾಲ ಪಾಟೀಲ, ವೆಂಕಟರಾಮರೆಡ್ಡಿ ಕಡತಾಲ, ಶರಣರೆಡ್ಡಿ ಕಡಚರ್ಲಾ, ವಿಷ್ಣುಕಾಂತ ಕುಲಕರ್ಣಿ, ರಾಘವೇಂದ್ರ ಕುಸುಮಾ, ಬಾಬಾ ಲಿಂಗಂಪಲ್ಲಿ, ಗುರುನಾಥರೆಡ್ಡಿ, ಸತೀಶರೆಡ್ಡಿ ಪಾಟೀಲ ರಂಜೋಳ, ಸದಾಶಿವರೆಡ್ಡಿ ಗೋಪನಪಲ್ಲಿ, ರಾಜಶೇಖರ ಪಾಟೀಲ ಕೋಲ್ಕುಂದಾ, ಅಧಿಕಾರಿಗಳಾದ ದಶ್ವಂತ ಗಾಜರೆ, ಶಿವಶರಪ್ಪ ಜೇವರ್ಗಿ, ವಿಶ್ವನಾಥ ಹಾಜರಿದ್ದರು.‌ ಕ್ಷೇತ್ರಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಸ್ವಾಗತಿಸಿದರು. ‌ಶಿವಕುಮಾರ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT