ಅಫಜಲಪುರ: ತಾಲ್ಲೂಕಿನ ದೇವಲಗಾಣಗಾಪುರ ಗ್ರಾಮದ ಭೀಮಾ ನದಿಯ ಚಕ್ರೇಶ್ವರ ತೀರ್ಥದಲ್ಲಿ ಮಂಗಳವಾರ ಶರೀರದಿಂದ ಬೇರ್ಪಟ್ಟ ರುಂಡ ಮತ್ತು ದೇಹ ಪತ್ತೆಯಾಗಿದೆ.
ಚಕ್ರೇಶ್ವರ ತೀರ್ಥದ ಆಸುಪಾಸು ರಕ್ತದ ಕಲೆಗಳು ಬಿದ್ದಿದ್ದು, ದುಷಕರ್ಮಿಗಳು ಕೊಲೆ ಮಾಡಿ ಬೀಸಾಡಿದ್ದ ಶಂಕೆ ವ್ಯಕ್ತವಾಗಿದೆ. ಅಂದಾಜು 25ರಿಂದ 30 ವರ್ಷದ ವ್ಯಕ್ತಿ ಇರಬಹುದು ಎಂದು ಊಹಿಸಲಾಗಿದೆ. ಮೃತ ವ್ಯಕ್ತಿ ಯಾರೆಂಬುದು ತಿಳಿದುಬಂದಿಲ್ಲ.
ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸಲು, ಎಎಸ್ಪಿ ಶ್ರೀನಿಧಿ, ಡಿವೈಎಸ್ಪಿ ಗೋಪಿ ಬಿ.ಆರ್, ಸಿಪಿಐ ಚನ್ನಯ್ಯ ಹಿರೇಮಠ, ಪಿಎಸ್ಐ ರಾಹುಲ್ ಪವಾಡೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.