ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: 20 ತಿಂಗಳ ಬಳಿಕ ‘ದಿಶಾ’ ಸಭೆ ಆರಂಭ

Published 11 ಫೆಬ್ರುವರಿ 2024, 6:24 IST
Last Updated 11 ಫೆಬ್ರುವರಿ 2024, 6:24 IST
ಅಕ್ಷರ ಗಾತ್ರ

ಕಲಬುರಗಿ: ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕಿದ್ದ ಕಲಬುರಗಿ ’ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲುಸ್ತುವಾರಿ’ (ದಿಶಾ) ಸಭೆ ಬರೋಬ್ಬರಿ 19 ತಿಂಗಳು 20 ದಿನಗಳ ಬಳಿಕ ಭಾನುವಾರ ಬೆಳಿಗ್ಗೆ 11.30ಕ್ಕೆ ಆರಂಭವಾಯಿತು.

ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ದಿಶಾ ಸಮಿತಿ ಅಧ್ಯಕ್ಷರು. ಸಭೆಯ ನೇತೃತ್ವವನ್ನು ಅವರೇ ವಹಿಸಬೇಕು. ಅವರಿಗೆ ಸಮಯದ ಅಭಾವ ಎದುರಾದ ಕಾರಣ ದಿಶಾ ಸಮಿತಿಯ ಸಹ ಅಧ್ಯಕ್ಷರಾಗಿರುವ ಭಗವಂತ ಖೂಬಾ ಅಧ್ಯಕ್ಷತೆ ವಹಿಸಬೇಕಿತ್ತು. ಅವರೂ ಗೈರು ಹಾಜರಾದ ಕಾರಣ ದಿಶಾ ಸಮಿತಿಯ ಸಹ ಅಧ್ಯಕ್ಷರಾಗಿರುವ ಸಂಸದ ಡಾ.ಉಮೇಶ ಜಾಧವ ಅಧ್ಯಕ್ಷತೆಯಲ್ಲಿ ಸಭೆ‌ ನಡೆಯುತ್ತಿದೆ.

ಕೇಂದ್ರ ಸರ್ಕಾರದ 43 ಇಲಾಖೆಗಳ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT