ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫಜಲಪುರ: 825 ಮನೆ ಮಂಜೂರು

Last Updated 14 ಜನವರಿ 2022, 6:33 IST
ಅಕ್ಷರ ಗಾತ್ರ

ಅಫಜಲಪುರ: 2021–22ನೇ ಸಾಲಿನ ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ ವಿಕಾಸ(ಗ್ರಾಮೀಣ) ಯೋಜನೆ ಅಡಿಯಲ್ಲಿ ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳಿಗೆ 828 ಮನೆಗಳು ಮಂಜೂರಾಗಿವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಸುಲ್ಫಿ ತಿಳಿಸಿದರು.

‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮಸಭೆ ನಡೆಸಿ, ಜ.25ರ ಒಳಗಾಗಿ ವಸತಿ ನಿಗಮಕ್ಕೆ ಅನುಮೋದನೆಗಾಗಿ ಮನೆಗಳ ಪಟ್ಟಿಯನ್ನು ಸಲ್ಲಿಸಬೇಕು. ತಾಲ್ಲೂಕಿನಲ್ಲಿ ಒಟ್ಟು 28 ಗ್ರಾಮ ಪಂಚಾಯಿತಿಗಳಿದ್ದು, ಗ್ರಾ.ಪಂ ಸದಸ್ಯರ ಸಂಖ್ಯೆಯ ಆಧಾರದ ಮೇಲೆ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT