ಶುಕ್ರವಾರ, ಜೂಲೈ 10, 2020
22 °C

ಅಫಜಲಪುರ ಎಪಿಎಂಸಿಯಿಂದ ಸಿಎಂ ಪರಿಹಾರ ನಿಧಿಗೆ ₹ 5 ಲಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಅಫಜಲಪುರ: ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 5 ಲಕ್ಷದ ಚೆಕ್‌ ನೀಡಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮಾತನಾಡಿ,‘ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಈ ಕಾರ್ಯಕ್ಕೆ ಬೆಂಬಲಿಸಲು ಪೂರಕವಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ₹ 5 ಲಕ್ಷ ಚೆಕ್ ನೀಡಲಾಗಿದೆ’ ಎಂದರು.

ಸಮಿತಿ ಅಧ್ಯಕ್ಷ ರಾಮಣ್ಣ ನಾಯ್ಕೋಡಿ, ಉಪಾಧ್ಯಕ್ಷ ಪ್ರಭುಲಿಂಗ ದೇವತ್ಕಲ್, ಕಾರ್ಯದರ್ಶಿ ಸುಮಂಗಲಾ ಹೂಗಾರ, ಎಪಿಎಂಸಿ ಸದಸ್ಯರಾದ ಮಂಜೂರ ಅಹಮದ್, ಅಗರಖೇಡ, ನಾಗಪ್ಪ ಮಂಜಳಾಕರ್, ಮಲ್ಲು ಮೇತ್ರಿ, ಗಂಗೂಬಾಯಿ ರಾಠೋಡ, ಪ್ರಭಾವತಿ ಮೇತ್ರೆ, ಮನೋಹರ ರಾಠೋಡ, ಜಗದೀಶ ಪಡಶೆಟ್ಟಿ, ಭಗವಂಥರಾಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು