ಅಫಜಲಪುರ: ತಾಲ್ಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿ ಸಾವೀಡಾಗಿರುವ ಘಟನೆ ಶುಕ್ರವಾರ ನಡೆದಿದೆ. ಪುಂಡಲೀಕ ಮೂಲಿಮನಿ (17), ಮಹೇಶ್ ಹಿರೇಗೌರ (16) ಮೃತರು.

ಮಣ್ಣೂರ ಗ್ರಾಮದ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಗೌರ(ಕೆ) ಗ್ರಾಮಸ್ಥರು ಅನ್ನ ಸಂತರ್ಪಣೆ ಏರ್ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಬ್ಬರು ಊಟಕ್ಕೆ ತೆರಳಿದ್ದಾರೆ. ಆದರೆ, ಅಡುಗೆ ಇನ್ನೂ ಸಿದ್ಧವಾಗಿಲ್ಲ ಎಂದು ತಿಳಿದು ಹತ್ತಿರದ ಭೀಮಾ ನದಿಗೆ ಈಜಾಡಲು ಹೋಗಿದ್ದಾರೆ. ಆದರೆ, ನದಿಯಲ್ಲಿ ನೀರಿನ ಒಳಹರಿವು ಹೆಚ್ಚಿದ್ದರಿಂದ ಈಜಾಡಲು ಸಾಧ್ಯವಾಗದೆ ನದಿಯಲ್ಲೇ ಕೊಚ್ಚಿಕೊಂಡು ಹೋಗಿದ್ದಾರೆ.

ಪೋಷಕರು ಇಬ್ಬರು ವಿದ್ಯಾರ್ಥಿಗಳು ಕಾಣೆಯಾಗಿದ್ದಾರೆಂದು ಭಾವಿಸಿ ಪರಿಚಯಸ್ಥರ ಮನೆಗಳಿಗೆ ಹೋಗಿ ವಿಚಾರಿಸಿದ್ದಾರೆ. ಶನಿವಾರ ಬೆಳಿಗ್ಗೆ ಮೃತ ದೇಹಗಳು ನೀರಿನಲ್ಲಿ ತೇಲಿಕೊಂಡು ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹೊರ ತೆಗೆದಿದ್ದಾರೆ. ಮೃತಪಟ್ಟ ವಿದ್ಯಾರ್ಥಿಗಳು ಬಂಕಲಗ ಪ್ರೌಢಶಾಲೆಯಲ್ಲಿ ಓದುತ್ತಿದ್ದರು. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.