ಅಫಜಲಪುರ: ತಾಲ್ಲೂಕಿನ ಗೊಬ್ಬುರ್ (ಬಿ) ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬೈಕ್ ಮತ್ತು ವಾಹನವೊಂದರ ನಡುವೆ ಶನಿವಾರ ಮುಖಾಮುಖಿ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ, ಕೆಎಸ್ಆರ್ಪಿ ಕಾನ್ಸ್ಟೆಬಲ್ವೊಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಶಿರವಾಳ ಗ್ರಾಮದ ಧರೆಪ್ಪ ಅಂಜುಟಗಿ (25) ಮೃತರು.

ಧರೆಪ್ಪ ತಮ್ಮ ತಂದೆಗೆ ಶಿರವಾಳದಿಂದ ಬುತ್ತಿ ತರಲು ಹೇಳಿ, ಅದನ್ನು ತೆಗೆದುಕೊಳ್ಳಲು ಸ್ನೇಹಿತನ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಅಫಜಲಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಗೊಬ್ಬುರ್ (ಬಿ) ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

‘ಅಪಘಾತಕ್ಕೆ ಕಾರಣನಾದ ಅಪರಿಚಿತ ವಾಹನ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮೃತ ಧರೆಪ್ಪ ಅವರ ತಂದೆ ವಿಜಯ ಕುಮಾರ ಅಂಜುಟಗಿ ಅವರು ದೇವಲ ಗಾಣಗಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅವರ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಆಳಂದ ಡಿವೈಎಸ್ಪಿ ತಮ್ಮರಾಯ ಪಾಟೀಲ, ಸಿಪಿಐ ಲಖನ್ ಮಸಗುಪ್ಪಿ ಹಾಗೂ ಪಿಎಸ್ಐ ಸಂಗೀತಾ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-31-534070760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.