ಅಫಜಲಪುರ: ರಾಜ್ಯ ಕಾಂಗ್ರೆಸ್ ಒಬಿಸಿ ಘಟಕದ ಉಪಾಧ್ಯಕ್ಷ ಜೆ.ಎಂ ಕೊರಬು ಅವರನ್ನು ವಿಧಾನ ಪರಿಷತ್ಗೆ ನಾಮ ನಿರ್ದೇಶನ ಮಾಡುವಂತೆ ಅಫಜಲಪುರದ ‘ಅಹಿಂದ’ ಸಮಾಜದ ಮುಖಂಡರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಹಿಂದೆ ಅಹಿಂದ ಮತಗಳು ಗಟ್ಟಿಯಾಗಿ ಉಳಿಯಬೇಕಾದರೆ ಹಿಂದುಳಿದ ವರ್ಗದ ನಾಯಕರಿಗೆ ರಾಜಕೀಯ ಸ್ಥಾನಮಾನ, ಪಕ್ಷದ ಉನ್ನತ ಜವಾಬ್ದಾರಿ ಮತ್ತು ಸರ್ಕಾರದ ಮಟ್ಟದಲ್ಲಿ ನಾಮನಿರ್ದೇಶನ, ಅಧಿಕಾರ ಹಂಚಿಕೆ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಸಮಾಜ ಸೇವಕ ಜೆ.ಎಂ.ಕೊರಬು ಅವರು ಕಾಂಗ್ರೆಸ್ನಿಂದ ವಿಧಾನ ಪರಿಷತ್ಗೆ ಪ್ರಬಲ ಆಕಾಂಕ್ಷಿಯಾಗಿದ್ದರು. ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ಇವರ ಹೆಸರು ಮುನ್ನಲೆಗೆ ಬಂದಿತ್ತು. ಬದಲಾದ ರಾಜಕೀಯ ಬೆಳವಣಿಗೆ ಮಧ್ಯೆ ಜೆ.ಎಂ.ಕೊರಬು ಅವರಿಗೆ ಕೊನೆ ಗಳಿಗೆಯಲ್ಲಿ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಅವರಿಗೆ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಲು ಈ ಭಾಗದ ಜನರು ಒತ್ತಾಯ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-31-1165217415

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.