ಅಫಜಲಪುರ: ‘ತಾಲ್ಲೂಕಿನಲ್ಲಿ ಕಾಂಗ್ರೆಸ್ನ ಹಲವಾರು ಕಾರ್ಯಕರ್ತರಿಗೆ ಶಾಸಕ ಎಂ.ವೈ.ಪಾಟೀಲ ಹಾಗೂ ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ ಅವರಿಂದ ಅನ್ಯಾವಾಗುತ್ತಿದ್ದೆ. ಅವರು ನಮ್ಮನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿ ಇಲ್ಲ. ಇದನ್ನು ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಮನೆ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ’ ಎಂದು ಕಾಂಗ್ರೆಸ್ ಮುಖಂಡ ಜಮೀಲ್ ಗೌಂಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನ ಅಭಿವೃದ್ಧಿ ಮಾಡಿದ್ದು, ರಾಧಾಕೃಷ್ಣ ಅವರು ಸಂಸದರಾಗಿ ಆಯ್ಕೆಯಾಗಲು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಕ್ಬುಲ್ ಪಟೇಲ್ ಅವರು ಕಾರಣರಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ರಾಧಾಕೃಷ್ಣರಿಗೆ ಅಫಜಲಪುರದಿಂದ 50 ಸಾವಿರ ಮತಗಳ ಲೀಡ್ ಕೊಡುವುದಾಗಿ ಹೇಳಿದ್ದ ಅರುಣಕುಮಾರ ಪಾಟೀಲರಿಗೆ ಅದು ಸಾಧ್ಯವಾಗಲಿಲ್ಲ’ ಎಂದರು.

‘ಮಕ್ಬುಲ್ ಪಟೇಲರು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿದ್ದರು. ಆದರೆ, ಅವರು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದಾರೆ. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-31-61462545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.