ಅಫಜಲಪುರ: ಮಳೆಗಾಲದಲ್ಲಿ ಸಂಭವಿಸ ಬಹುದಾದ ಪ್ರವಾಹ, ಮನೆ ಕುಸಿತ ಸೇರಿದಂತೆ ಪ್ರಕೃತಿ ವಿಕೋಪಗಳಿಗೆ ತಕ್ಷಣ ಸ್ಪಂದಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಅಫಜಲಪುರ ತಾಲ್ಲೂಕಿನಲ್ಲಿ ವಿಶೇಷ ತುರ್ತು ಸ್ಪಂದನಾ ತಂಡ ರಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಮಹಾಂತೇಶ್, ‘ಕಳೆದ ಮೂರು ವರ್ಷಗಳಿಂದ ತಾಲ್ಲೂಕಿನ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಪರಿಣಿತರಿಂದ ತರಬೇತಿ ಪಡೆದಿರುವ ತಂಡದ ಸದಸ್ಯರು ವಿಪತ್ತು ನಿರ್ವಹಣೆ ಮತ್ತು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದೇ ಅನುಭವದ ಆಧಾರದ ಮೇಲೆ ಈ ವರ್ಷ ಮಳೆಗಾಲದ ಸಂದರ್ಭಗಳಲ್ಲಿ ತುರ್ತು ನೆರವು ಒದಗಿಸಲು ಪ್ರತ್ಯೇಕ ಸ್ಪಂದನಾ ತಂಡವನ್ನು ರೂಪಿಸಲಾಗಿದೆ’ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲಕುಮಾರ್ ಎಸ್.ಎಸ್ ಹಾಗೂ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯ್ಸ್ ಅವರ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಲಾಗಿದೆ. ಅಫಜಲಪುರ ತಾಲ್ಲೂಕಿನ ತುರ್ತು ಸ್ಪಂದನಾ ತಂಡದ ನಾಯಕರಾಗಿ ಸುನೀಲ್ ಮತ್ತು ದಿಗಂಬರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ತಂಡ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಅಫಜಲಪುರ ವಿಪತ್ತು ನಿರ್ವಹಣಾ ಸಮಿತಿಯ ಕೋರ್ ಕಮಿಟಿ ಸಭೆ ನಡೆಸಿ ಮಳೆಗಾಲದ ಸಿದ್ಧತೆ, ಅಪಾಯ ಪ್ರದೇಶಗಳ ಗುರುತು ಹಾಗೂ ತುರ್ತು ಸ್ಪಂದನೆ ಕುರಿತಂತೆ ಸಮಗ್ರ ವಿಮರ್ಶೆ ನಡೆಸಲಾಯಿತು.

ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ, ತಾಲ್ಲೂಕು ಯೋಜನಾಧಿಕಾರಿ ಮಹಾಂತೇಶ್, ಜನಜಾಗೃತಿ ಪ್ರಾದೇಶಿಕ ಮೇಲ್ವಿಚಾರಕ ಮಲ್ಲೇಶ್, ಶೌರ್ಯ ಸಮಿತಿಯ ಮಾಸ್ಟರ್ ಮತ್ತು ಕ್ಯಾಪ್ಟನ್ಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-31-1468457451

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.