ಅಫಜಲಪುರ: ‘ರೈತರ ಅನುಕೂಲಕ್ಕಾಗಿ ಹಗಲಿನಲ್ಲಿ 7 ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕು’ ಎಂದು ಒತ್ತಾಯಿಸಿ ತಾಲ್ಲೂಕು ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಜೆಸ್ಕಾಂ ಹಾಗೂ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ರೈತ ಮುಖಂಡರಾದ ಶ್ರೀಮಂತ ಬಿರಾದಾರ, ಗುರು ಚಾಂದಕೋಟೆ, ರಮೇಶ ಶೆಟ್ಟಿ ಮಾತನಾಡಿ, ‘ಅಫಜಲಪುರ ತಾಲ್ಲೂಕಿನ ರೈತರು ಭೀಮಾ ನದಿ ಮತ್ತು ಬೋರ್ವೆಲ್ಗಳ ಮೂಲಕ ನೀರಾವರಿ ಮಾಡಿ ಕಬ್ಬು ಹಾಗೂ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ. ಆದರೆ, ಹಲವು ಗ್ರಾಮಗಳಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಇಲ್ಲದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ತಿಳಿಸಿದರು.

‘ಮೇಲಿಂದ ಮೇಲೆ ನಿರಂತರವಾಗಿ ವಿದ್ಯುತ್ ಟ್ರಿಪ್ ಆಗುತ್ತಿರುವುದರಿಂದ ಬೆಳೆಗಳಿಗೆ ಸಮರ್ಪಕವಾಗಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ಹಗಲಿನಲ್ಲಿ ನಿರಂತರವಾಗಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು’ ಎಂದು ರಮೇಶ ಪಾಟೀಲ, ಲತೀಫ್ ಬೋಗನಳ್ಳಿ, ಶಿವಶಂಕರ ಪಾಟೀಲ, ಅರ್ಜುನ ಸೋಮಜಾಳ, ರಾಜಕುಮಾರ ಬಡದಾಳ ಒತ್ತಾಯಿಸಿದರು.

ತಹಶೀಲ್ದಾರ್ ಸಂಜಯಕುಮಾರ ದಾಸರ ಹಾಗೂ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾಗರಾಜ ಅವರು ಮನವಿ ಸ್ವೀಕರಿಸಿ, ‘ಆದಷ್ಟು ಬೇಗನೆ ರೈತರಿಗೆ ಹಗಲು ವೇಳೆಯಲ್ಲಿ ನಿರಂತರವಾಗಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಭೀಮಾಶ್ಯಾ ವಡಗೇರಾ, ಶರಣ ಪ್ರಸಾದ ನೂಲಾ, ಅಣ್ಣರಾಯ ಪಾಟೀಲ, ಧಾನು ನೂಲ, ಮಹಾಂತಗೌಡ ಪಾಟೀಲ, ಶರಣು ದಿವಾಣಜಿ, ವಿಠಲ ಪೂಜಾರಿ, ಯಶವಂತ ಪಟ್ಟೇದಾರ್, ಮಲ್ಲಿಕಾರ್ಜುನ ಪಾಟೀಲ, ಅಣ್ಣರಾಯಗೌಡ ಪಾಟೀಲ, ಬಸವರಾಜ ಪಾಟೀಲ, ಸುರೇಶ ಗೌಡ ಪಾಟೀಲ, ಸಂಗಣ್ಣ ನಾರಸೆರ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-31-552913487

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.