ಅಫಜಲಪುರ: ತಾಲ್ಲೂಕಿನ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ಪಬ್ಲಿಕ್ ಶಾಲೆಯಲ್ಲಿ ಅಗ್ನಿಶಾಮಕ ಠಾಣೆ ವತಿಯಿಂದ ರಾಷ್ಟ್ರೀಯ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ‘ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ’ ಆಯೋಜಿಸಲಾಗಿತ್ತು.

ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ವಿಶ್ವನಾಥ ಕಾಮರೆಡ್ಡಿ ಹಾಗೂ ತಂಡ ವಿದ್ಯಾರ್ಥಿಗಳಿಗೆ ಅಗ್ನಿ ಅವಘಡಗಳನ್ನು ಹೇಗೆ ತಡೆಗಟ್ಟಬೇಕು, ಅಗ್ನಿ ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅಗ್ನಿಶಾಮಕ ಉಪಕರಣಗಳ ಬಳಕೆ ಕುರಿತು ಪ್ರಾಯೋಗಿಕ ಪ್ರದರ್ಶನ ನೀಡಿದರು.

ವಿದ್ಯಾರ್ಥಿಗಳು ಅಗ್ನಿ ಸುರಕ್ಷತೆಯ ಮಹತ್ವವನ್ನು ಅರಿತುಕೊಂಡು, ತುರ್ತು ಸಂದರ್ಭಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಬಗ್ಗೆ ಮಾರ್ಗದರ್ಶನ ಪಡೆದರು. ಈ ಪ್ರದರ್ಶನವು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿತು.

ಈ ಸಂದರ್ಭದಲ್ಲಿ ಪ್ರಕಾಶ ಮೇತ್ರಿ ನಾಗಯ್ಯ ಎಂ., ಜಗದೇವಪ್ಪ ರಾಜಶೇಖರ, ಮಹಾಂತೇಶ, ಶರಣಪ್ರಮೋದ ಸಂಸ್ಥೆ ಅಧ್ಯಕ್ಷ ಮಹಾದೇವಪ್ಪ ಕರೂಟಿ, ಸದಸ್ಯರಾದ ಶಿವಶರಣಪ್ಪ ರೋಡಗಿ, ಮಲ್ಲನಗೌಡ ಬಗಲಿ, ಆಡಳಿತಾಧಿಕಾರಿ ಗುರುರಾಜ ಕೆಂದೂರ, ಪ್ರಾಚಾರ್ಯೆ ಭಾಗ್ಯಜ್ಯೋತಿ ಎಚ್. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-31-81824702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.