ಅಫಜಲಪುರ: ‘ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಆರೋಗ್ಯವೂ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಕಂಪನಿ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ’ ಎಂದು ಕಂಪನಿಯ ಎಚ್.ಆರ್. ಜಯಶ್ರೀ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೋರಮಂಡಲ ಇಂಟರ್ನ್ಯಾಷನಲ್ ಕಂಪನಿಯ ‘ನಮ್ಮ ಗ್ರೋಮೋರ್ ಸೆಂಟರ್’ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಶಾಲೆಯಲ್ಲಿ ಹೆಚ್ಚಾಗಿ ರೈತರ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿರುವ ಹಿನ್ನೆಲೆಯಲ್ಲಿ, ಸುರಕ್ಷಿತ ಕುಡಿಯುವ ನೀರಿನ ಅಗತ್ಯತೆ ಮನಗಂಡು ಕಂಪನಿಯು ಈ ಸೇವೆಯನ್ನು ನೀಡಿದೆ. ಇದರ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ನಿತ್ಯ ಶುದ್ಧ ನೀರು ಲಭ್ಯವಾಗಲಿದ್ದು, ಅವರ ಆರೋಗ್ಯ ರಕ್ಷಣೆಗೆ ಸಹಕಾರಿಯಾಗಲಿದೆ’ ಎಂದರು.

ಮುಖ್ಯ ವ್ಯವಸ್ಥಾಪಕ ಪ್ರದೀಪ್ ರೆಡ್ಡಿ ಅವರು, ‘ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂಲಸೌಲಭ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ. ಈ ಘಟಕವು ವಿದ್ಯಾರ್ಥಿಗಳ ದಿನನಿತ್ಯದ ಜೀವನದಲ್ಲಿ ಉಪಯುಕ್ತವಾಗಲಿದೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕ ಎಸ್.ಎಸ್. ಪಾಟೀಲ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-31-2109523623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.